ಸೋಮವಾರಪೇಟೆ, ಜೂ. 6 : ವಿಷ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ತಾಕೇರಿ ಗ್ರಾಮದಲ್ಲಿ ನಡೆದಿದೆ.ತಾಕೇರಿ ಗ್ರಾಮದ ಕಿರಣ್ ಎಂಬವರೇ ಆತ್ಮಹತ್ಯೆಗೆ ಶರಣಾದವರು. ಕೆಲ ವರ್ಷಗಳ ಹಿಂದೆ ಮರದಿಂದ ಬಿದ್ದು ಕಾಲಿಗೆ ಪೆಟ್ಟಾದ ನಂತರ ಕುಂಟುತ್ತಲೇ ಸಾಗುತ್ತಿದ್ದ ಕಿರಣ್ ಅವರು ವಿಪರೀತ ಮದ್ಯ ಸೇವಿಸುತ್ತಿದ್ದು, ಕಳೆದ ತಾ. 1ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಜೀವನ್ಮರಣ ಸ್ಥಿತಿಯಲ್ಲಿದ್ದ ಇವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಸಹ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ದಿನ ಮೃತಪಟ್ಟಿರುವದಾಗಿ ಸಂಬಂಧಿಕರು ತಿಳಿಸಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.