ಮಡಿಕೇರಿ, ಜೂ. 22: ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿ.ವಿ., ಮಡಿಕೇರಿಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ವಿಸ್ತರಣಾ ಶಿಕ್ಷಣ ಘಟಕದ ವತಿಯಿಂದ ಕೃಷಿ ಸಂಶೋಧನಾ ಕೇಂದ್ರದ ಮೂಲ ಸೌಕರ್ಯಗಳ ಉದ್ಘಾಟನಾ ಸಮಾರಂಭ ತಾ. 24 ರಂದು ನಡೆಯಲಿದೆ.

ಮಡಿಕೇರಿಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯ ಕ್ರಮದಲ್ಲಿ ಅತಿಥಿಗಳಾಗಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇನ್ನಿತರರು ಭಾಗವಹಿಸಲಿದ್ದಾರೆ. ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿ.ವಿ. ಉಪಕುಲಪತಿ ಡಾ.ಸಿ. ವಾಸುದೇವಪ್ಪ ಅಧ್ಯಕ್ಷತೆ ವಹಿಸುವರು.