ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯದ ಹಾಗೂ 7ನೇ ಹೊಸಕೋಟೆಯ ಒಕ್ಕೂಟದ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ದಾಸಂಡ ರಮೇಶ್ ಚಂಗಪ್ಪ ಚಾಲನೆ ನೀಡಿದರು.

7ನೇ ಹೊಸಕೋಟೆಯ ಮಹಾಗಣಪತಿ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಪರಿಸರ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಮರ-ಗಿಡಗಳನ್ನು ನಾಶಗೊಳಿಸುತ್ತಿದ್ದು, ಪರಿಸರದ ವಿನಾಶಕ್ಕೆ ಕಾರಣರಾಗಿದ್ದೇವೆ ಇದರಿಂದ ಪರಿಸರದಲ್ಲಿ ಪಕೃತಿ ವಿಕೋಪ, ಬರಗಾಲ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಪರಿಸರ ನಾಶದಿಂದ ಇಂದಿನ ದಿನಗಳಲ್ಲಿ ವಿವಿಧ ರೀತಿಯ ರೋಗರುಜಿನಗಳು ಮಾನವರಲ್ಲಿ ಕಂಡು ಬರುತ್ತಿದೆ. ನಮ್ಮ ಮುಂದಿನ ಪೀಳಿಗೆಯು ಬದುಕಲು ಕಷ್ಟಸಾಧ್ಯವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಉತ್ತಮ ಪರಿಸರ ಸಂರಕ್ಷಿಸುವ ದಿಸೆಯಲ್ಲಿ ತಮ್ಮ ಮನೆಗಳಲ್ಲಿಯೇ ಗಿಡಗಳನ್ನು ನೆಡುವ ಮೂಲಕ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಕರೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಸರಸ್ವತಿ, 7ನೇ ಹೊಸಕೋಟೆ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಸೇವಾ ಪ್ರತಿನಿಧಿಗಳಾದ ನಿರ್ಮಲ ಪ್ರಕಾಶ್, ಶಿವಕುಮಾರ್ ಇದ್ದರು.ಕುಶಾಲನಗರ: ಪರಿಸರವನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮನ್ನು ತೊಡಗಿಸಿಕೊಳ್ಳಬೇಕಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕ ಹರೀಶ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದಾಪಟ್ಟಣ ಒಕ್ಕೂಟದ ಆಶ್ರಯದಲ್ಲಿ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಸರ ನಾಶದಿಂದ ಹವಾಮಾನ ವೈಪರೀತ್ಯ ಉಂಟಾಗಿದೆ. ಸಕಾಲದಲ್ಲಿ ಮಳೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಮನೆ ಆವರಣ, ಜಮೀನಿನಲ್ಲಿ ಒಂದೊಂದು ಗಿಡ ನೆಟ್ಟು ಪರಿಸರವನ್ನು ಅಭಿವೃದ್ಧಿಗೊಳಿಸಬೇಕಿದೆ ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲೀಲಾವತಿ ಮಾತನಾಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ಮೂಡಿಸಬೇಕಿದೆ. ಪ್ರತಿಯೊಬ್ಬರೂ ಒಂದೊಂದು ಗಿಡಗಳನ್ನು ನೆÉಟ್ಟು ಪೋಷಿಸುವ ಕಾರ್ಯಕ್ಕೆ ಮುಂದಾಗುವಂತೆ ಪ್ರೇರೇಪಿಸುವ ಕೆಲಸವಾಗಬೇಕಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕಿ ಕೆ.ಸಿ. ದೇವಮ್ಮ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸದಸ್ಯರಾದ ಶೋಭಾ ಶಿವಪ್ಪ, ಪುಷ್ಪಾ ನಾಗೇಶ್, ನಂಜರಾಯಪಟ್ಟಣ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸತ್ಯನಾರಾಯಣ, ಒಕ್ಕೂಟದ ಸೇವಾ ಪ್ರತಿನಿಧಿ ಚಂದ್ರಾವತಿ, ಸದಸ್ಯರುಗಳು, ಶಿಕ್ಷಕರು ಇದ್ದರು.