ಸೋಮವಾರಪೇಟೆ, ಜು. 7: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರಕು ವಂತಾಗಬೇಕು ಎಂದು ಬೆಂಗಳೂರು ಸರ್ಪಭೂಷಣ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು. ಮಸಗೋಡು ಚನ್ನಮ್ಮ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ದಿ. ಚನ್ನವೀರಯ್ಯ ಜ್ಞಾಪಕಾರ್ಥ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಜನತೆ ವಿದ್ಯಾವಂತರಾಗಬೇಕು. ಆಗಮಾತ್ರ ಸುಶಿಕ್ಷಿತ ಭಾರತ ನಿರ್ಮಾಣ ಸಾಧ್ಯವೆಂದ ಅವರು, ಉತ್ತಮ ಶಿಕ್ಷಣದಿಂದ ಅತ್ಯುತ್ತಮ ಪ್ರಜೆಗಳನ್ನು ರೂಪಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಚನ್ನಮ್ಮ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಎಂ.ಸಿ. ದಿವಾಕರ್ ಉಪಸ್ಥಿತರಿದ್ದರು.

2016-17ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯ ಕೊಮಾರಿ ಗೌಡ ಸ್ವಾಗತಿಸಿ, ಶಿಕ್ಷಕಿ ಕಾಂಚನಾ ಕಾರ್ಯಕ್ರಮ ನಿರ್ವಹಿಸಿದರು.

ಶಿಕ್ಷಕ ಕಿಶೋರ್ ಕುಮಾರ್ ವಂದಿಸಿದರು.