ಬೆಂಗಳೂರು, ಜು. 5 : ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆ, ಮಲಪ್ರಭ ಹಾಗೂ ತುಂಗ-ಭದ್ರಾ ಪ್ರದೇಶಗಳಲ್ಲಿ 60 ದಿನಗಳೊಳಗಾಗಿ ಮೋಡ ಬಿತ್ತನೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಂತರ ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ ಬಿ. ಜಯಚಂದ್ರ ಅವರು ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಪ್ರಸಕ್ತ ಸಾಲಿನ ಜೂನ್ ಮಾಸಾಂತ್ಯವರೆಗೆ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಹೊಯ್ಸಳ ಪ್ರಾಜೆಟ್ ಪ್ರೈವೇಟ್ ಲಿಮಿಟೆಡ್ ಮೂಲಕ ರೂ. 30 ಕೋಟಿ
ಮುಂಗಾರು ಮಳೆ ಕೊರತೆ : ಮೋಡ ಬಿತ್ತನೆಗೆ ಅನುಮೋದನೆ
(ಮೊದಲ ಪುಟದಿಂದ) ವೆಚ್ಚದಲ್ಲಿ ಮೋಡ ಬಿತ್ತನೆ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಭಿವೃದ್ಧಿ ಆಯುಕ್ತರಿಗೆ ಸಂಪುಟ ನಿರ್ದೇಶನ ನೀಡಿದೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರು ಮೋಡ ಬಿತ್ತನೆ ಕಾರ್ಯದ ಉಸ್ತುವಾರಿ ವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.