ಸೋಮವಾರಪೇಟೆ, ಆ. 19: ಸಂಘ-ಸಂಸ್ಥೆಗಳು ಸಾಮಾಜಿಕ ಉನ್ನತಿಗೆ ಶ್ರಮಿಸುವ ಮೂಲಕ ಸಮಾಜ ಸುಧಾರಣಾ ಕಾರ್ಯ ಮಾಡಬೇಕು ಎಂದು ಇಲ್ಲಿನ ಪೊಲೀಸ್ ಠಾಣಾಧಿಕಾರಿ ಶಿವಣ್ಣ ಅಭಿಪ್ರಾಯಿಸಿದರು.

ಇಲ್ಲಿನ ಗ್ರಂಥಾಲಯ ಸಮೀಪ ನೂತನವಾಗಿ ತೆರೆಯಲಾಗಿರುವ ಕರ್ನಾಟಕ ರಕ್ಷಣ ವೇದಿಕೆಯ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ನಗರಾಧ್ಯಕ್ಷ ಮಂಜುನಾಥ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ, ಮೋಟಾರ್ ಯೂನಿಯನ್ ಅಧ್ಯಕ್ಷ ಸಿ.ಸಿ. ನಂದ, ಮಾಜಿ ಸೈನಿಕ ಗಣೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ಕರವೇ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಸುರೇಶ್, ಸಾಹಿತ್ಯ ಘಟಕದ ಅಧ್ಯಕ್ಷ ಸುದರ್ಶನ್, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್ ಸೇರಿದಂತೆ ಇತರರು ಭಾಗವಹಿಸಿದ್ದರು.