ಮಡಿಕೇರಿ ಸೆ. 4 :ಐತಿಹಾಸಿಕ ಮಡಿಕೇರಿ ದಸರಾ ಕ್ರೀಡಾಕೂಟ ಸೆ.23, 24 ಮತ್ತು 26 ರಂದು ನಡೆಯಲಿದೆ ಎಂದು ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿಯ ಅಧ್ಯಕ್ಷರಾದ ಬಿ.ಕೆ.ಜಗದೀಶ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಸೆ.23 ರಂದು ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮ್ಯಾರಥಾನ್ ಸ್ಪರ್ಧೆ, ಸೆ.24 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾಕೂಟಗಳು ಹಾಗೂ ಸೆ.26 ರಂದು ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 94482 06688 ಮೊ. ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.