ಮಡಿಕೇರಿ, ಸೆ. 8: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎರಡನೇ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಾಗಾರ ನಡೆಯಿತು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಬಿ.ಜೆ. ಮಹೇಂದ್ರ, ಸಂಸ್ಥೆಯ ಪ್ರಾಂಶುಪಾಲ ಡಾ. ಕೆ.ಬಿ. ಕಾರ್ಯಪ್ಪ, ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ, ಡಾ. ಕೆ.ಬಿ. ಮುತ್ತಪ್ಪ, ಜಂಟಿ ನಿರ್ದೇಶಕರು (ನಿವೃತ್ತ), ಕ್ಷಯರೋಗ ವಿಭಾಗ ಆ.ಕು.ಕ ಇಲಾಖೆ ಬೆಂಗಳೂರು, ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಬೋಧಕ, ಬೋಧಕೇತರ ವೃಂದದವರು ಸಭೆಯಲ್ಲಿ ಹಾಜರಿದದ್ದರು.

ಸಂಸ್ಥೆಯ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ರಾಮಚಂಂದ್ರ ಕಾಮತ್, ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥರು, ಸಮುದಾಯ ವೈದ್ಯಶಾಸ್ತ್ರ ವಿಭಾಗದವರು ನೆರೆದಿದ್ದ ಸಭಿಕರಿಗೆ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರುಗಳನ್ನು ಪರಿಚಯಿಸಿದರು.

ಸಂಸ್ಥೆಯ ಅಂಗರಚನಾ ಶಾಸ್ತ್ರ ವಿಭಾಗ, ಶರೀರ ಕ್ರಿಯಾಶಾಸ್ತ್ರ ವಿಭಾಗ, ಸಮುದಾಯ ವೈದ್ಯಶಾಸ್ತ್ರ ವಿಭಾಗ ಮತ್ತು ಜೀವ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಮ್ಮ ವಿಭಾಗದ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು. ಡಾ. ವಿಶಾಲ್ ಕುಮಾರ್ ವಿದ್ಯಾರ್ಥಿಗಳಿಗೆ ಸಂಸ್ಥೆಯ ವಸತಿ ನಿಲಯದ ನಿಯಮಗಳ ಬಗ್ಗೆ ವಿವರಿಸಿದರು.

ಸಂಸ್ಥೆಯ 2016-17 ನೇ ಸಾಲಿನ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಾದ ಐಶ್ವರ್ಯ ಮತ್ತು ವಿನ್ಯಾಸ ಚಂದ್ರ ತಮ್ಮ ಅನುಭವ ಮತ್ತು ಅನಿಸಿಕೆಗಳನ್ನು ಹೊಸ ವಿದ್ಯಾರ್ಥಿಗಳೊಡನೆ ಹಂಚಿಕೊಂಡರು.

ನಿರೂಪಣೆಯನ್ನು ಡಾ. ಎಂ.ಎಂ. ಪ್ರಿಯದರ್ಶಿನಿ, ಸಹಾಯಕ ಪ್ರಾಧ್ಯಾಪಕರು, ರೋಗ ಲಕ್ಷಣ ಶಾಸ್ತ್ರ ವಿಭಾಗ ಮತ್ತು 2ನೇ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿನಿ ಹಿತ ನೆರವೇರಿಸಿದರೆ, ವಿದ್ಯಾರ್ಥಿನಿ ಶರಣ್ಯ ಪ್ರಾರ್ಥಿಸಿದರು.

ಸಂಸ್ಥೆಯ ರಿಜಿಸ್ಟ್ರಾರ್ ಡಾ. ರಾಮಚಂದ್ರ ಕಾಮತ್ ಅತಿಥಿಗಳನ್ನು ಪರಿಚಯಿಸಿದರೆ, ಸಂಸ್ಥೆಯ ಪ್ರಾಂಶುಪಾಲ ಡಾ. ಕೆ.ಬಿ. ಕಾರ್ಯಪ್ಪ ವಂದಿಸಿದರು.