ಮಡಿಕೇರಿ, ಸೆ. 8: 2017-18ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕಾಲ್ಚೆಂಡು ಪಂದ್ಯಾಟದಲ್ಲಿ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ಬಾಲಕರು ಹಾಗೂ ಬಾಲಕಿಯರು ತಾಲೂಕು ಮಟ್ಟದ ಪಂದ್ಯದಲ್ಲಿ ಗೆಲುವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಕಾಲೇಜಿನ ಬಾಲಕರ ತಂಡವು ಸಿದ್ದಾಪುರ ಪಿ.ಯು. ಕಾಲೇಜು, ಸರಕಾರಿ ಪದವಿಪೂರ್ವ ಕಾಲೇಜು, ವೀರಾಜಪೇಟೆ, ಸಂತ ಅನ್ನಮ್ಮ ಕಾಲೇಜು, ವೀರಾಜಪೇಟೆ ಹಾಗೂ ಕಾವೇರಿ ಕಾಲೇಜು, ಗೋಣಿಕೊಪ್ಪಲನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆ, ಬಾಲಕಿಯರು ಶ್ರೀಮಂಗಲ ಪದವಿಪೂರ್ವ ಕಾಲೇಜು, ಕಾವೇರಿ ಕಾಲೇಜು ವೀರಾಜಪೇಟೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ವೀರಾಜಪೇಟೆಯನ್ನು ಮಣಿಸಿ ಪ್ರಶಸ್ತಿಯನ್ನು ಪಡೆಯಿತು.