ಮಡಿಕೇರಿ: ಆರ್ಜಿ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಪಂಚಾಯಿತಿ ವಾರ್ಡ್ ಸಭೆಯನ್ನು ಆಯಾ ವಾರ್ಡ್‍ನ ಸದಸ್ಯರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಪೆರುಂಬಾಡಿಯಲ್ಲಿ ತಾ. 11 ರಂದು ಪಂಚಾಯಿತಿ ಕಚೇರಿಯಲ್ಲಿ ಬಿ.ಎಂ. ರಮೇಶ್ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಕಲ್ಲುಬಾಣೆಯಲ್ಲಿ ತಾ. 11 ರಂದು ಕಲ್ಲುಬಾಣೆ ಅಂಗನವಾಡಿಯಲ್ಲಿ ಜಾಫರ್ ಸಾಧೀಕ್ ಅಧ್ಯಕ್ಷತೆಯಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿದೆ. ಕಿರುಮಕ್ಕಿಯಲ್ಲಿ ತಾ. 12 ರಂದು ನಾಗೇಶ್ ಮನೆಯ ಹತ್ತಿರ ಹೆಚ್.ಬಿ. ಉದಯ್ ಕುಮಾರ್ ಅಧ್ಯಕ್ಷತೆಯಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

*ಗೋಣಿಕೊಪ್ಪಲು: ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬಿಳೂರು, ನಲ್ಲೂರು ಮತ್ತು ಬೆಸಗೂರು ಗ್ರಾಮಗಳ ಗ್ರಾಮಸಭೆ ತಾ. 14 ರಂದು ಪೂರ್ವಾಹ್ನ 11 ಗಂಟೆಗೆ ಎಂ.ಎಂ. ಗುಲ್‍ಶಾದ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಕೆ. ನಿಡುಗಣೆ: ಕೆ. ನಿಡುಗಣೆ ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆ ತಾ. 14 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉದಿಯಂಡ ರೀಟಾ ಮುತ್ತಣ್ಣ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ.

ನಾಪೋಕ್ಲು: ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ನಾಪೋಕ್ಲು, ಬೇತು ಮತ್ತು ಕೊಳಕೇರಿ ಗ್ರಾಮಗಳ ಜಮಾಬಂದಿ ಸಭೆ ತಾ. 14 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ವೀರಾಜಪೇಟೆ: ವೀರಾಜಪೇಟೆ ತಾಲೂಕು ಪಂಚಾಯಿತಿ ಸಭೆ ತಾ.ಪಂ. ಅಧ್ಯಕ್ಷೆ ಸ್ಮಿತ ಪ್ರಕಾಶ್ ಅಧ್ಯಕ್ಷತೆಯಲ್ಲಿ ತಾ. 12 ರಂದು ಪೂರ್ವಾಹ್ನ 10.30 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣ ಪೊನ್ನಂಪೇಟೆಯಲ್ಲಿ ಏರ್ಪಡಿಸಲಾಗಿದೆ.

ಹೊಸ್ಕೇರಿ: ಹೊಸ್ಕೇರಿ ಗ್ರಾಮ ಪಂಚಾಯಿತಿ ಜಮಾಬಂದಿ ಸಭೆ ತಾ. 12 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಎನ್. ಮಮತಾ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

*ಗೋಣಿಕೊಪ್ಪಲು: ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ಜಮಾಬಂದಿ ಮತ್ತು ಲೆಕ್ಕ ಪರಿಶೋಧನಾ ಗ್ರಾಮಸಭೆ ತಾ. 11 ರಂದು ಪೂರ್ವಾಹ್ನ 11 ಗಂಟೆಗೆ ಟಿ. ಶೆಟ್ಟಿಗೇರಿ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಸುಮಂತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಚೆಟ್ಟಳ್ಳಿ: ಜಮಾಬಂದಿ ಮತ್ತು ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. 12 ರಂದು ಪೂರ್ವಾಹ್ನ 11 ಗಂಟೆಗೆ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಪಂಚಾಯಿತಿ ಅಧ್ಯಕ್ಷೆ ಪಿ.ವಿ. ವತ್ಸಲ ಅಧ್ಯಕ್ಷತೆಯಲ್ಲಿ 2016-17ನೇ ಸಾಲಿನ ಸಭೆ ನಡೆಯಲಿದೆ.