ಕುಶಾಲನಗರ, ಸೆ. 13: ಕುಶಾಲನಗರ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯ ನಡೆದ ಸಂದರ್ಭ ಇಬ್ಬರು ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ.

ಸಮಾಜಕಲ್ಯಾಣ ಇಲಾಖೆ, ಪೋಲಿಸ್‍ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಮತ್ತು ಮಕ್ಕಳ ಸಹಾಯವಾಣಿ ಸದಸ್ಯರ ತಂಡದೊಂದಿಗೆ ಹಲವೆಡೆ ಕಾರ್ಯಾಚರಣೆ ನಡೆಸಿದ್ದು ಸಂಬಂಧಿಸಿದ ಸಂಸ್ಥೆಯ ಮಾಲೀಕರಿಗೆ ಸ್ಥಳದಲ್ಲೇ ನೋಟಿಸ್ ನೀಡಲಾಗಿದೆ.

ಬಾಲಕಾರ್ಮಿಕರನ್ನು ದುಡಿಮೆಗೆ ತೊಡಗಿಸಿರುವ ಪ್ರಕರಣ ಕಂಡುಬಂದಲ್ಲಿ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಲಾಗುವದು. ಕಾನೂನು ಉಲ್ಲಂಘಿಸಿದ ವ್ಯಕ್ತಿಗಳಿಗೆ ಕಲಂ 14(1) ಮತ್ತು (1-ಎ)ರ ಪ್ರಕಾರ 6 ತಿಂಗಳಿನಿಂದ 2 ವರ್ಷಗಳವರೆಗೆ ಕುಶಾಲನಗರ, ಸೆ. 13: ಕುಶಾಲನಗರ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯ ನಡೆದ ಸಂದರ್ಭ ಇಬ್ಬರು ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ.

ಸಮಾಜಕಲ್ಯಾಣ ಇಲಾಖೆ, ಪೋಲಿಸ್‍ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಮತ್ತು ಮಕ್ಕಳ ಸಹಾಯವಾಣಿ ಸದಸ್ಯರ ತಂಡದೊಂದಿಗೆ ಹಲವೆಡೆ ಕಾರ್ಯಾಚರಣೆ ನಡೆಸಿದ್ದು ಸಂಬಂಧಿಸಿದ ಸಂಸ್ಥೆಯ ಮಾಲೀಕರಿಗೆ ಸ್ಥಳದಲ್ಲೇ ನೋಟಿಸ್ ನೀಡಲಾಗಿದೆ.

ಬಾಲಕಾರ್ಮಿಕರನ್ನು ದುಡಿಮೆಗೆ ತೊಡಗಿಸಿರುವ ಪ್ರಕರಣ ಕಂಡುಬಂದಲ್ಲಿ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಲಾಗುವದು. ಕಾನೂನು ಉಲ್ಲಂಘಿಸಿದ ವ್ಯಕ್ತಿಗಳಿಗೆ ಕಲಂ 14(1) ಮತ್ತು (1-ಎ)ರ ಪ್ರಕಾರ 6 ತಿಂಗಳಿನಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವದು. ಕಲಂ 3 ಮತ್ತು 3ಎ ಪ್ರಕಾರ ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್ ಸಹ ದಾಖಲಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ರಾಮಲಿಂಗಂ ಮಾಹಿತಿ ನೀಡಿದ್ದಾರೆ.

ಕುಶಾಲನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ಮಹದೇವಸ್ವಾಮಿ, ಸಹಾಯಕ ಠಾಣಾಧಿಕಾರಿ ಖತೀಜ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ನಿರ್ದೇಶಕರಾದ ಶಿರಾಜ್ ಅಹಮ್ಮದ್, ಮಕ್ಕಳ ಸಹಾಯವಾಣಿ ತಂಡದ ಸದಸ್ಯೆ ಶೋಭಾ ಲಕ್ಷ್ಮೀ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತ ಅಬ್ದುಲ್‍ನಿಸಾರ್, ಸಮಾಜಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ಲೋಕೇಶ್, ಕುಶಾಲನಗರ ಜಿಲ್ಲಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಚೇತನ್ ಇದ್ದರು.