ಕೂಡಿಗೆ, ಸೆ. 13: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದೂವರೆ ವರ್ಷ ಸೇವೆ ಸಲ್ಲಿಸಿ ಇದೀಗ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿರುವ ನಾಲ್ಕು ಜನ ಪೊಲೀಸ್ ಸಿಬ್ಬಂದಿಗಳನ್ನು ಬೀಳ್ಕೊಡಲಾಯಿತು.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿವೈಎಸ್‍ಪಿ ಸಂಪತ್‍ಕುಮಾರ್ ಮಾತನಾಡುತ್ತಾ, ಪೊಲೀಸ್ ಸೇವೆ 24 ಗಂಟೆಯ ಸೇವೆಯಾಗಿದ್ದು, ಸೇವೆಯಲ್ಲಿ ಕರ್ತವ್ಯ ಪ್ರಜ್ಞೆ ಮತ್ತು ಪರಿಶ್ರಮ ಇದ್ದಲ್ಲಿ ಯಶಸ್ಸು ಕಾಣಲು ಸಾಧ್ಯ ಅದನ್ನು ಸಿಬ್ಬಂದಿಗಳು ಮೈಗೂಡಿಸಿಕೊಂಡು ಮುಂದೆ ಸಾಗಿದಾಗ ತನ್ನ ಸೇವೆಯ ಸಾಧನೆ ಪ್ರಯೋಜನಕಾರಿಯಾಗುತ್ತದೆ.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಶಾಲನಗರ ವೃತ್ತ ನಿರೀಕ್ಷಕ ಕ್ಯಾತೇಗೌಡ, ಕುಶಾಲನಗರ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಜಗದೀಶ್, ಸೋಮವಾರಪೇಟೆ ಠಾಣಾಧಿಕಾರಿ ಶಿವಣ್ಣ, ಶನಿವಾರಸಂತೆ ಠಾಣಾಧಿಕಾರಿ ಅಪ್ಪಾಜಿ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜೆ.ಇ.ಮಹೇಶ್ ಇದ್ದರು.

ಮುಂಬಡ್ತಿ ಪಡೆದು ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಾದ ಆಶಾ, ಮಂಜುನಾಥ್, ಸುಧೀರ್, ಸುದೀಪ್ ಇವರುಗಳಿಗೆ ಪೊಲೀಸ್ ಅಧಿಕಾರಿಗಳು ಶಾಲು ಹೊದಿಸಿ ಸನ್ಮಾನಿಸಿ ಬೀಳ್ಕೊಟ್ಟರು.