ಮಡಿಕೇರಿ, ಸೆ. 14: ನಗರದ ವ್ಯಾಲಿವ್ಯೂ ಹೊಟೇಲ್ ಸಭಾಂಗಣದಲ್ಲಿ ತಾ. 15 ರಂದು (ಇಂದು) ಬೆಳಿಗ್ಗೆ 10.30ಕ್ಕೆ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಹಾಗೂ ಯುವ ಮೋರ್ಚಾ ಆಶ್ರಯದಲ್ಲಿ ಕಾರ್ಣಿಯ ಅಂಧತ್ವ ಮುಕ್ತ ಅಭಿಯಾನ ಏರ್ಪಡಿಸಲಾಗಿದೆ. ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ, ಮೇಲ್ಮನೆ ಸದಸ್ಯ ಸುನಿಲ್ ಸುಬ್ರಮಣಿ ಸೇರಿದಂತೆ ಬಿಜೆಪಿ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕೋಷ್ಠ ಸಂಚಾಲಕ ಡಾ. ಬಿ.ಸಿ. ನವೀನ್ ತಿಳಿಸಿದ್ದಾರೆ.