ಜಿ.ಪಂ.ಕೆ.ಡಿ.ಪಿ ಸಭೆ

2017-18ನೇ ಸಾಲಿನ ಆಗಸ್ಟ್ ಅಂತ್ಯದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 120 ಅಂಶ ಕಾರ್ಯಕ್ರಮ ಸೇರಿದಂತೆ ಜಿಲ್ಲಾ ಮಟ್ಟದ ಮಾಸಿಕ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ

ಜಮಾಬಂದಿ ಸಭೆ

ಕಾಕೋಟುಪರಂಬು ಗ್ರಾಮ ಪಂಚಾಯಿತಿ 2016-17ನೇ ಸಾಲಿನ ಜಮಾಬಂದಿ ಸಭೆಯು ಬೆಳಗ್ಗೆ 10.30 ಗಂಟೆಗೆ ಅಧ್ಯಕ್ಷೆ ಮೋಹಿನಿ ಕೆ. ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಕೋಟು ಪರಂಬು ಗ್ರಾ.ಪಂ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.

ಶೈಕ್ಷಣಿಕ ಸಮ್ಮೇಳನ

ಕೊಡಗು ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಮತ್ತು ಸಂಯುಕ್ತ ಪದವಿ ಪೂರ್ವ ವಿದ್ಯಾಲಯಗಳ ಪ್ರಾಂಶುಪಾಲರ ಸಂಘ ಇವರ ವತಿಯಿಂದ ಬೆಳಗ್ಗೆ 11.30 ಗಂಟೆಗೆ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆಯು ಎಫ್.ಎಂ.ಸಿ.ಪದವಿ ಕಾಲೇಜು ರಸ್ತೆಯ ಮುಖ್ಯೋಪಾಧ್ಯಾಯರ ಸಂಘದ ಕಟ್ಟಡದಲ್ಲಿ ನಡೆಯಲಿದೆ.

ಪೂರ್ವಭಾವಿ ಸಭೆ

ಮಧ್ಯಾಹ್ನ 1 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತುಲಾ ಸಂಕ್ರಮಣ ಕಾವೇರಿ ಜಾತ್ರೆಯ ಪೂರ್ವಭಾವಿ ಸಭೆಯು ಜರುಗಲಿದೆ.