ಮಡಿಕೇರಿ, ಸೆ.15: 2017ರ ಸೆಪ್ಟೆಂಬರ್ ಮಾಹೆಯಲ್ಲಿ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್. ಸೀತಾರಾಂ ಅವರ ಅಧ್ಯಕ್ಷತೆಯಲ್ಲಿ ತಾ. 16 ರಂದು (ಇಂದು) ಮಧ್ಯಾಹ್ನ 1.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಸರಾ ಆಚರಣೆಯ ಪೂರ್ವಭಾವಿ ಸಭೆ ನಡೆಯಲಿದೆ ಎಂದು ನಗರ ದಸರಾ ಸಮಿತಿ ಗೌರವ ಕಾರ್ಯದರ್ಶಿ ಹಾಗೂ ಪೌರಾಯುಕ್ತರಾದ ಬಿ.ಶುಭ ತಿಳಿಸಿದ್ದಾರೆ.