ಸುಂಟಿಕೊಪ್ಪ, 18 : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪÁ್ರಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಆಶ್ರಯದಲ್ಲಿ ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ವನಸುಮ ಇಕೋ ಕ್ಲಬ್ ಹಾಗೂ ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ‘ವಿಶ್ವ ಓಝೋನ್ ಪದರ ರಕ್ಷಣಾ ದಿನಾಚರಣೆ’ ಆಚರಿಸಲಾಯಿತು.

‘ವಿಶ್ವ ಒಝೋನ್ ಪದರ ರಕ್ಷಣೆ’ಯ ಮಹತ್ವ ಕುರಿತು ಮಾಹಿತಿ ನೀಡಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್, ಓಝೋನ್ ಪದರಕ್ಕೆ ಯಾವದೇ ರೀತಿಯಲ್ಲಿ ಹಾನಿಯಾಗದಂತೆ ನಾವು ಜಾಗ್ರತೆ ವಹಿಸಬೇಕಿದೆ. ಓಝೋನ್ ಪದರದ ನಾಶವನ್ನು ತಡೆಯಲು ಎಲ್ಲಾ ರಾಷ್ಟ್ರಗಳು ಸಂಘಟಿತರಾಗಿ ಜಾಗತಿಕ ತಾಪಮಾನವನ್ನು ತಡೆಗಟ್ಟಬೇಕಿದೆ ಎಂದರು.

‘ವಿಶ್ವ ಓಝೋನ್ ದಿನಾಚರಣೆ’ ಯ ಮಹತ್ವ ಕುರಿತು ಮಾತನಾಡಿದ ಕಾರ್ಯಕ್ರಮ ಸಂಯೋಜಕರೂ ಆದ ವಿಜ್ಞಾನ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಪರಿಸರಕ್ಕೆ ಯಾವದೇ ಧಕ್ಕೆಯನ್ನುಂಟು ಮಾಡದೆ ನಾವು ವಾಯುಮಂಡಲ ರಕ್ಷಿಸಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪಿ.ಸೋಮಚಂದ್ರ, ಪ್ರತಿಯೊಬ್ಬರೂ ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಫಿಲಿಪ್‍ವಾಸ್, ಪರಿಸರ ಮಾಲಿನ್ಯ ತಡೆಗಟ್ಟಲು ಎಲ್ಲರೂ ಪ್ರಯತ್ನಿಸಬೇಕು ಎಂದರು. ಉಪನ್ಯಾಸಕ ಎಸ್.ಹೆಚ್.ಈಶ, ‘ಓಝೋನ್ ಪದರದ ರಕ್ಷಣೆಯಲ್ಲಿ ನಾವು ವಹಿಸಬೇಕಾದ ಪಾತ್ರ’ದ ಕುರಿತು ಮಾಹಿತಿ ನೀಡಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಗಿಡನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೈ.ಎಂ. ಕರುಂಬಯ್ಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದÀ ಆಡಳಿತ ಸಹಾಯಕ ಬಿ.ಎಸ್. ಜೋಯಪ್ಪ, ಉಪನ್ಯಾಸಕರು ಇದ್ದರು.

ಪರಿಸರ ಜಾಥಾ : ನಂತರ ವಿಶ್ವ ಓಝೋನ್ ದಿನದ ಅಂಗವಾಗಿ ಏರ್ಪಡಿಸಿದ್ದ ಪರಿಸರ ಜಾಥಾದಲ್ಲಿ ವಿದ್ಯಾರ್ಥಿಗಳು ಓಝೋನ್ ಪದರದ ರಕ್ಷಣೆ ಮತ್ತು ಜಾಗತಿಕ ತಾಪಮಾನಕ್ಕೆ ಸಂಬಂಧಿಸಿದಂತೆ ಭಿತ್ತಿಫಲಕದೊಂದಿಗೆ ಪರಿಸರ ಘೋಷಣೆಗಳನ್ನು ಕೂಗಿ ಜನರ ಗಮನ ಸೆಳೆದರು.