ಮಡಿಕೇರಿ, ಸೆ. 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾಗಿರುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿ ಊಟ ನೀಡುವ ‘ಮಾತೃಪೂರ್ಣ’ ಯೋಜನೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ ಸಿಂಹ, ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಎಂ. ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವಿಜು ಸುಬ್ರಮಣಿ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ.