ಮಡಿಕೇರಿ, ಅ. 9: ವ್ಯಕ್ತಿ ಯೋರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಈರಳೆವಳಮುಡಿ ಸಮೀಪ ಅಬ್ಯಾಲ ಗ್ರಾಮದ ನಿವಾಸಿ, ಮಹೇಂದ್ರ ವರ್ಮ (32) ಎಂಬವರೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಇಂದು ತಮ್ಮ ಮನೆಯ ಕೊಠಡಿಯೊಂದರಲ್ಲಿ ಡಬಲ್ ಬ್ಯಾರಲ್ ಬಂದೂಕಿನಿಂದ ಬಾಯಿಯ ಒಳಭಾಗಕ್ಕೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಡಿಕೇರಿಯ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿ ಯಾಗಿದ್ದ ಮಹೇಂದ್ರ ವರ್ಮ, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.