*ಗೋಣಿಕೊಪ್ಪಲು, ಅ. 9: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಅಮ್ಮತ್ತಿ ಕಾರ್ಮಾಡಿನಲ್ಲಿ ನಿರ್ಮಿಸಲಾದ ನೂತನ ಗೋದಾಮನ್ನು ಶಾಸಕ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಉದ್ಘಾಟಿಸಿದರು. ರೈತರ ಅನುಕೂಲಕ್ಕಾಗಿ 25 ಲಕ್ಷ ಅನುದಾನದಲ್ಲಿ ನಬಾರ್ಡ್ ಯೋಜನೆಯಡಿ ಗೋದಾಮನ್ನು ನಿರ್ಮಿಸಲಾಗಿದೆ.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ ಆರ್.ಎಂ.ಸಿ. ಅಧ್ಯಕ್ಷ ಸುವಿನ್ ಗಣಪತಿ, ಸದಸ್ಯ ಕಿಲನ್ ಗಣಪತಿ, ತಾ.ಪಂ. ಸದಸ್ಯ ನೆಲ್ಲಿರ ಚಲನ್ ಕುಮಾರ್, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಅರುಣ್ ಭೀಮಯ್ಯ, ಯುವ ಮೋರ್ಚ ಅಧ್ಯಕ್ಷ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಸುಜಾ ಕುಶಾಲಪ್ಪ ಉಪಸ್ಥಿತರಿದ್ದರು.