ನಾಪೆÇೀಕ್ಲು, ಅ. 9 : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳವದರಿಂದ ದೈಹಿಕವಾಗಿ ಬಲಾಢ್ಯರಾಗಲು ಸಾಧ್ಯ ಎಂದು ನಾಪೆÇೀಕ್ಲು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಹೇಳಿದರು.
ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಡಿಕೇರಿ ತಾಲೂಕು ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮಕ್ಕಳ ಮೂರು ದಿನದ ಕ್ರೀಡಾ ಕೂಟ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕ್ರೀಡೆ ಶಾರೀರಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಪೂರಕವಾಗಿದೆ. ಕ್ರೀಡೆಯಿಂದ ಶಿಸ್ತು, ಸಮಯ ಪ್ರಜ್ಞೆ ಮಕ್ಕಳಲ್ಲಿ ಜಾಗೃತವಾಗುತ್ತದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿಯೂ ಕ್ರೀಡೆ ಪ್ರಮುಖ ಪಾತ್ರ ವಹಿಸಲಿದೆ ಎಂದ ಅವರು, ಗುರಿ ಮುಟ್ಟುವವರೆಗೆ ಛಲದಿಂದ ಮುನ್ನುಗಿದರೆ ಸಾಧನೆ, ಯಶಸ್ಸು ಸಾಧ್ಯ ಎಂದರು.
ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮಾತನಾಡಿ ಕ್ರೀಡೆ ಮಕ್ಕಳ ಬದುಕಿನ ಪ್ರಮುಖ ಅಂಗ. ಕ್ರೀಡೆಯಿಂದ ಸಂತೋಷ, ನೆಮ್ಮದಿ ಲಭಿಸಲಿದೆ. ನೌಕರಿಯಲ್ಲೂ ಕ್ರೀಡೆಗೆ ಹೆಚ್ಚಿನ ಸ್ಥಾನಮಾನವಿದೆ. ಎಲ್ಲಾ ವಿದ್ಯಾರ್ಥಿಗಳೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆಯನ್ನು ಜೊತೆಯಲ್ಲಿ ಕೊಂಡೊಯ್ಯಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣ ಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಕೊಂಡಿರ ನಾಣಯ್ಯ ಕ್ರೀಡಾ ಜ್ಯೋತಿ ಬೆಳಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಕೇಲೇಟಿರ ಪುಷ್ಪ ವಹಿಸಿದ್ದರು.
ವೇದಿಕೆಯಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಲ್ಲೇಟಿರ ಅರುಣ್ ಬೇಬಾ, ಹೊದವಾಡ ರಾಫೆಲ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮುಜೀಬ್, ನಿವೃತ್ತ ಶಿಕ್ಷಕ ಚೌರೀರ ಉದಯ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್, ಶಿಕ್ಷಣ ಸಂಸ್ಥೆಯ ಪರಿವೀಕ್ಷಕ ಚಂದ್ರಹಾಸ್, ನಿವೃತ್ತ ಶಿಕ್ಷಕ ಕುಲ್ಲೇಟಿರ ಗುರುವಪ್ಪ, ಮಡಿಕೇರಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೇಹಬೂಬ್ ಸಾಬ್ ಮತ್ತಿತರರು ಇದ್ದರು. ಕ್ರೀಡಾ ಕೂಟದ ಅಂಗವಾಗಿ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ನಾಪೆÇೀಕ್ಲು ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಟಿ.ಆರ್.ಸುಬ್ರಮಣಿ ಪ್ರಾರ್ಥನೆ. ಚೆಪ್ಪೆಂಡಡಿ ಶಾಲೆಯ ದೈಹಿಕ ಶಿಕ್ಷಕ ಸಿ.ಕೆ.ತಿಮ್ಮಯ್ಯ ಸ್ವಾಗತಿಸಿ, ಜಿಲ್ಲಾ ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಮೃತ್ಯುಂಜಯ ವಂದಿಸಿದರು.