ನಾಪೆÉÇೀಕ್ಲು, ಅ. 9: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಗ್ರಾಮೀಣ ಜನರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ 2.93 ಕೋಟಿ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಿದೆ ಎಂದು ಕೊಡಗು-ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹೇಳಿದರು.ನಾಪೆÉÇೀಕ್ಲು ಪಟ್ಟಣದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ಜನ ಔಷಧಿ ಯೋಜನೆ, ಗ್ರಾಮೀಣ ಪ್ರದೇಶದ ಜನರು ಹೊಗೆ ಮುಕ್ತವಾಗಿರಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಆರಂಭಿಸಲಾಗಿದೆ. ಉಚಿತ ಆರೋಗ್ಯ ತಪಾಸಣಾ ಯೋಜನೆಯನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲು ಎಲ್ಲಾ ಸಿದ್ಧತೆಗಳು ನಡೆದಿದೆ. ಕೇಂದ್ರ ಸರಕಾರದ ಯೋಜನೆಗಳನ್ನು ಮತ್ತು ಸಾಧನೆಗಳನ್ನು ಗ್ರಾಮೀಣ ಜನರಿಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು.

ಯಡಿಯೂರಪ್ಪ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಬಡ ಹೆಣ್ಣುಮಕ್ಕಳಿಗಾಗಿ ಭಾಗ್ಯಲಕ್ಷ್ಮಿ ಯೋಜನೆ, ವೃದ್ಧರಿಗೆ ಸಂಧ್ಯಾ ಸುರಕ್ಷಾ ಯೋಜನೆ, 4 ಸಾವಿರ ಸುವರ್ಣ ಗ್ರಾಮ ಯೋಜನೆ, ಬಸವ ವಸತಿ ಯೋಜನೆ, ಅಂಬೇಡ್ಕರ್ ಭವನ, ವಾಲ್ಮಿಕೀ ಭವನ, ಶಕ್ತಿ ಭವನ, ಹಜ್ ಭವನ, ಶಾದಿ ಮಹಲ್ ನಿರ್ಮಾಣ, ರೈತರ ಸಾಲ ಮನ್ನ, ಬಡ್ಡಿ ಮನ್ನ ಸೇರಿದಂತೆ ಹಲವು ಯೋಜನೆಗಳನ್ನು ಜನತೆಗೆ ನೀಡಿದ ಕೀರ್ತಿ ಇದೆ. ಆದರೆ ಈಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಜನತೆಗೆ ಏನು ನೀಡಿದ್ದಾರೆ ಎಂಬದನ್ನು ಎಲ್ಲರೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಆಡಳಿತದಲ್ಲಿ ಜಿಲ್ಲೆಯ ರಸ್ತೆಗಳಲ್ಲಿ ಓಡಾಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವದು ಅವರ ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ ರಾಜ್ಯದ ಕಾಂಗ್ರೆಸ್ ಪಕ್ಷ ಕಳ್ಳರ ಪಕ್ಷ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗೆ ಅಭಿವೃದ್ಧಿಗೆ ಯಾವದೇ ಹಣ ಮಂಜೂರು ಮಾಡದೇ ರಾಜ್ಯದ ಹಣವನ್ನು ಲೂಟಿ ಮಾಡಿ ಪಕ್ಷದ ಹೈಕಮಾಂಡಿಗೆ ಸಲ್ಲಿಸುತ್ತಿದ್ದಾರೆ ಎಂದು ದೂರಿದರು.

ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ಸಿದ್ದರಾಮಯ್ಯ ಸರಕಾರ ಜಾತಿಗಳ ಮಧ್ಯೆ ದ್ವೇಷದ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಕೇಂದ್ರ ಸರಕಾರದ ಎಲ್ಲಾ ಯೋಜನೆಗಳನ್ನು ತಮ್ಮದೆಂದು ಹೇಳಿಕೊಳ್ಳುತ್ತಾ ಜನರನ್ನು ವಂಚಿಸುವ ಕಾರ್ಯ ಕೈಗೊಂಡಿದೆ ಎಂದು ದೂರಿದರು. ಪೆಟ್ರೋಲ್

(ಮೊದಲ ಪುಟದಿಂದ) ಬೆಲೆ ಏರಿಕೆಯ ಬಗ್ಗೆ ಎಲ್ಲರು ಪ್ರಧಾನಿ ಮೋದಿಯನ್ನು ದೂರುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಶೇ. 32 ವ್ಯಾಟ್ ತೆಗೆದರೆ ಪೆಟ್ರೋಲ್ 42 ರೂ.ಗೆ ಸಿಗಲಿದೆ. ಈ ಬಗ್ಗೆ ಜನರನ್ನು ತಪ್ಪುದಾರಿಗೆ ಎಳೆಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದರು.

ಸಭೆಯನ್ನು ಉದ್ದೇಶಿಸಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಭಾರತೀಶ್, ಮುಖಂಡ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಬಿಜೆಪಿ ಕಾರ್ಯದರ್ಶಿ ಬಾಲಚಂದ್ರ ಕಳಗಿ, ಅಲ್ಪ ಸಂಖ್ಯಾಂತ ಘಟಕದ ಅಧ್ಯಕ್ಷ ಎಂ.ಜಿ. ಜಾಹೀರ್, ವಲಯ ಅಧ್ಯಕ್ಷ ಅಂಬಿ ಕಾರ್ಯಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆÀ ಶೋಭಾ ಮೋಹನ್, ಸದಸ್ಯರಾದ ಕೋಡಿಯಂಡ ಇಂದಿರಾ, ಉಮಾಪ್ರಭು, ಗ್ರಾಮ ಪಂಚಾಯಿತಿ ಸದಸ್ಯ ಶಿವಚಾಳಿಯಂಡ ಜಗದೀಶ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.