ಮಡಿಕೇರಿ, ಅ. 23 : ನಗರದ ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಗರದ ಶ್ರೀರಾಘವೇಂದ್ರ ದೇವಸ್ಥಾನ ಬಳಿ ನಡೆಯಿತು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿಯಲ್ಲಿ ನಡೆದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ತಂಡಗಳು ಪಾಲ್ಗೊಂಡಿದ್ದವು. ಮಹಿಳೆಯರ ಜಾನಪದ ತಂಡ, ಮಕ್ಕಳ ಸೊಲೋ ಡ್ಯಾನ್ಸ್, ಮಕ್ಕಳ ಛದ್ಮವೇಷ ಸ್ಪರ್ಧೆ, ಬಾಲಕ ಬಾಲಕಿಯರ ನೃತ್ಯ ಗಮನ ಸೆಳೆಯಿತು. ಸ್ಪರ್ಧೆಯಲ್ಲಿದ್ದ ಆಕರ್ಷಕ ಮಕ್ಕಳ ಮಂಟಪಗಳು ಬಹುಮಾನಕ್ಕಾಗಿ ತೀವ್ರ ಪೈಪೋಟಿಯನ್ನು ನೀಡಿದವು.

ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆಯ ಅಧ್ಯಕ್ಷ ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಮ್ಮಿ ದೇವಯ್ಯ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್, ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಹಿರಿಯರಾದ ಪೊನ್ನಚ್ಚನ ಲಲಿತ ಸೋಮಯ್ಯ, ನಿವೃತ್ತ ದೈಹಿಕ ಶಿಕ್ಷಕ ಲಕ್ಷ್ಮಣ್ ಸಿಂಗ್, ಪ್ರಮುಖ ಪವನ್, ಮಾಜಿ ಸೈನಿಕ ಅಪ್ಪಯ್ಯ, ಕಲಾನಗರ ವೇದಿಕೆಯ ಉಪಾಧ್ಯಕ್ಷ ಪಾಪುರವಿ, ಹಿರಿಯ ನಾಗರಿಕರಾದ ತಿಮ್ಮಯ್ಯ ಮತ್ತು ವಿ.ಕೆ.ಬಾಬು ಉಪಸ್ಥಿತರಿದ್ದರು.

ಈ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 7 ಮಂದಿ ಸಾಧಕ ರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾಕೂಟ, ರಂಗೋಲಿ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವ ರಿಗೆ ಇದೇ ಸಂದರ್ಭ ಬಹುಮಾನ ವನ್ನು ವಿತರಿಸಲಾಯಿತು. ಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಅಧಿಕ ಮಂದಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೆರೆದರು.