ಸುಂಟಿಕೊಪ್ಪ, ಅ. 23: ಸಂತ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಬಾಲಕರು ಬಾಸ್ಕೆಟ್‍ಬಾಲ್ ಪಂದ್ಯಾವಳಿಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಂತ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಾಲಕರು ಬಾಸ್ಕೆಟ್‍ಬಾಲ್ ಪಂದ್ಯಾವಳಿಯು ಇತ್ತೀಚೆಗೆ ಮಾದಾಪುರ ಡಿ. ಚೆನ್ನಮ್ಮ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಡಿಕೇರಿ ಮತ್ತು ಪೊನ್ನಪೇಟೆ ಶಾಲಾ ತಂಡಗಳ ವಿರುದ್ಧ ಜಯಗಳಿಸುವ ಮೂಲಕ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.