ಮಡಿಕೇರಿ, ನ. 4 : ಸಾರಿಗೆ ವ್ಯವಸ್ಥೆಯಲ್ಲಿ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಸ್ಪೀಡ್ ಗವರ್ನರ್ ಕ್ರಮವನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಪ್ರವಾಸಿ ವಾಹನ ಮಾಲೀಕರ ಹಾಗೂ ಚಾಲಕರ ಸಂಘ ತಾ.7 ರಂದು ಬೆಳಿಗ್ಗೆ 10 ಗಂಟೆಗೆ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಕುಳಿಯಕಂಡ ಸಂಪತ್ ತಿಳಿಸಿದ್ದಾರೆ.

ಲಾರಿ ಮಾಲೀಕರ ಹಾಗೂ ಚಾಲಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಖಪ್ಪ ಅವರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಸ್ಪೀಡ್ ಗವರ್ನರ್‍ಗೆ ಒಳಪಡುವ ಜಿಲ್ಲೆಯ ಬಸ್, ಲಾರಿ, ಟೆಂಪೋ, ಕಾರು ಸೇರಿದಂತೆ ಎಲ್ಲಾ ವಾಹನಗಳ ಮಾಲೀಕರು ಮತ್ತು ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.