ನಾಪೆÇೀಕ್ಲು, ನ. 10: ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್‍ನ ಮಡಿಕೇರಿ ತಾಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಕನಕಜಯಂತಿ ಆಚರಣೆ ಪ್ರಯುಕ್ತ ನಾಪೆÇೀಕ್ಲುವಿನ ಸಂಗೀತ ಶಿಕ್ಷಕಿ ಸರಸ್ವತಿಮನೋಹರಿ ಅವರಿಂದ ಜಾನಪದ ಗೀತಗಾಯನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅಪ್ಪಚೆಟ್ಟೋಳಂಡ ವನು ವಸಂತ, ಜಾನಪದ ಮಾನವನ ಅಸ್ತಿತ್ವದೊಂದಿಗೆ ಮಿಳಿತವಾದ ಕಲೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕನ್ನಡ ಜಾನಪದ ಪರಿಷತ್‍ನ ಜಿಲ್ಲಾ ಘಟಕದ ಅಧ್ಯಕ್ಷೆ ಡಾ. ಕಾವೇರಿ ಪ್ರಕಾಶ್ ಮಾತನಾಡಿ, ಜಿಲ್ಲೆಯಲ್ಲಿ ಜಾನಪದಕ್ಕೆ ವಿಶೇಷ ಸ್ಥಾನವಿದ್ದು ವಿಕಾಸಕ್ಕಾಗಿ ಜಾನಪದವನ್ನು ಬಳಸಿಕೊಳ್ಳಬೇಕಾಗಿದೆ ಎಂದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಪಿ. ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಜಾನಪದ ಪರಿಷತ್‍ನ ಪದಾಧಿಕಾರಿಗಳಾದ ಬೊಟ್ಟೋಳಂಡ ಮಿಟ್ಟು ಪೂಣಚ್ಚ, ಕನ್ನಿಕಾ, ಲೀನಾ, ನಂದೀಶ್ ಮತ್ತಿತರರು ಪಾಲ್ಗೊಂಡಿದ್ದರು.
ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷ ಸಿ.ಎಸ್. ಸುರೇಶ್ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕ ರವಿಕುಮಾರ್ ವಂದಿಸಿದರು. ಸಂಗೀತ ಶಿಕ್ಷಕಿ ಎಂ.ಎನ್. ಸರಸ್ವತಿ ಮನೋಹರಿ ಅವರಿಂದ ಏರ್ಪಡಿಸಲಾಗಿದ್ದ ಜಾನಪದ ಗೀತಗಾಯನ ಜನಮನ ರಂಜಿಸಿತು. ವಿದ್ಯಾರ್ಥಿಗಳಿಗೆ ಜಾನಪದ ಗೀತಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿಭಾಗದಲ್ಲಿ ನಿಯಾಸ್ ಮತ್ತು ಇಯಾಸ್ ತಂಡ ಪ್ರಥಮ ಸ್ಥಾನ ಗಳಿಸಿದರು. ರಚನ ಮತ್ತು ಸಾಹಿತ್ಯ ತಂಡ ದ್ವಿತೀಯ ಸ್ಥಾನ ಗಳಿಸಿದರು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ರೆಹನ್ ಕಾಳಯ್ಯ ಪ್ರಥಮ ಸ್ಥಾನ ಗಳಿಸಿದರೆ ರತನ್ ದೇವಯ್ಯ ದ್ವಿತೀಯ ಸ್ಥಾನಗಳಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಬಲ್ಲಮಾವಟಿಯ ಕೆನರಾ ಬ್ಯಾಂಕ್ ವತಿಯಿಂದ ಬಹುಮಾನ ವಿತರಿಸಲಾಯಿತು.