ಮಡಿಕೇರಿ, ನ. 22: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್, ತಾ. 23 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸ್ಪರ್ಧೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್. ಮೋಹನ್, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ.ಧನಂಜಯ್, ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಮಹಾಲಿಂಗಯ್ಯ, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ವಿಶ್ವನಾಥ್ ಇತರರು ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಎಂ. ಭವಾನಿ, ಡಿ.ವೈ.ಎಸ್.ಪಿ. ಸುಂದರ್‍ರಾಜ್, ಕೊಡಗು ಜಿಲ್ಲಾ ಘಟಕದ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಫಿಲಿಪ್ ವಾಸ್, ನಾಗರಾಜು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಬೆಳ್ಳಿಯಪ್ಪ ಇತರರು ಭಾಗವಹಿಸಲಿದ್ದಾರೆ.