ಸೋಮವಾರಪೇಟೆ,ನ.22: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ದಿನಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸಾಮಗ್ರಿಗಳೆಲ್ಲ ಸುಟ್ಟು ಕರಕಲಾದ ಘಟನೆ ಸಮೀಪದ ಆಲೆಕಟ್ಟೆ ರಸ್ತೆಯಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.ಆಲೆಕಟ್ಟೆ ರಸ್ತೆಯಲ್ಲಿ ಪಿ. ಮೊಹಿದ್ದೀನ್ ಬ್ಯಾರಿ ಎಂಬವರಿಗೆ ಸೇರಿದ ಎರಡು ಅಂಗಡಿ ಮಳಿಗೆಗಳನ್ನು ಬಾಡಿಗೆ ಪಡೆದಿದ್ದ ವಿಜು ಎಂಬವರು ದಿನಸಿ ಅಂಗಡಿಯನ್ನು ನಡೆಸುತ್ತಿದ್ದರು. ವಿಜು ಅವರು ಮಂಗಳವಾರ ರಾತ್ರಿ ಸುಮಾರು 10 ಗಂಟೆ ಸಮಯಕ್ಕೆ ಅಂಗಡಿ ಬಾಗಿಲು ಮುಚ್ಚಿ ಮನೆಗೆ ತೆರಳಿದ್ದರು.
ಬುಧವಾರ ಬೆಳಗ್ಗಿನ ಜಾವ ಸುಮಾರು 5 ಗಂಟೆಗೆ ಮಳಿಗೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ಮಳಿಗೆಯಲ್ಲಿದ್ದ ದಿನಸಿ ಪದಾರ್ಥಗಳು, ಕ್ಯಾಶ್ ಬಾಕ್ಸ್‍ನಲ್ಲಿದ್ದ ನಗದು ಸೇರಿದಂತೆ ಸುಮಾರು 1.50 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದರೆ, ಅಂಗಡಿಯ ಲ್ಲಿದ್ದ ಪೀಠೋಪಕರಣಗಳು ಹಾಗೂ ಮೇಲ್ಚಾವಣಿಗಳ ಮರಮುಟ್ಟುಗಳು ಸಂಪೂರ್ಣ ಹೊತ್ತಿ ಉರಿದಿದ್ದು, 2 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ.
ಈ ಬಗ್ಗೆ ಪರಿಹಾರಕ್ಕಾಗಿ ವಿಜು ಅವರು ತಾಲೂಕು ತಹಶೀಲ್ದಾರ್‍ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ.