ಕುಶಾಲನಗರ, ನ. 24: ಕುಶಾಲನಗರವನ್ನು ಕೇಂದ್ರವಾಗಿಸಿ ಕೊಂಡು ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಧರಣಿ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಅವರ ನೇತೃತ್ವದಲ್ಲಿ ನಡೆದ ಧರಣಿ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆ ಕೂಗಿದರು. ಕೆಲಕಾಲ ಮಾನವ ಸರಪಳಿ ರಚಿಸುವ ಮೂಲಕ ನೂತನ ತಾಲೂಕು ರಚನೆಗೆ ಆಗ್ರಹ ವ್ಯಕ್ತಪಡಿಸಿದರು.

ಪಟ್ಟಣದ ಕಾರು ನಿಲ್ದಾಣದಲ್ಲಿನ ಗುಂಡುರಾವ್ ಸತ್ಯಾಗ್ರಹ ವೇದಿಕೆಯಲ್ಲಿ ನಡೆದ ಧರಣಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್.ಅಶೋಕ್, ಹೋರಾಟ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಪ್ರಮುಖರಾದ ಭರತ್, ಶ್ಯಾಂ, ವಿನು, ಜಗದೀಶ್ ಮತ್ತಿತರರು ಇದ್ದರು.