ಸುಂಟಿಕೊಪ್ಪ, ನ. 24: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ನಿವೇಶನ ರಹಿತರ ಪಟ್ಟಿಯನ್ನು ಕಲೆ ಹಾಕುತ್ತಿದ್ದು, ಸರಕಾರದ ಭೂ ಕಂದಾಯ ಕಾಯ್ದೆ ಅನುಸಾರ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ನಿವೇಶನ ರಹಿತರು ಪಂಚಾಯಿತಿಗೆ ಮಾಹಿತಿ ನೀಡಬೇಕು ಎಂದು ಗ್ರಾ.ಪಂ. ಪಿಡಿಓ ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ ಅವರಿಗೆ ಸೂರು ಕಲ್ಪಿಸಲು ಗ್ರಾಮ ಪಂಚಾಯಿತಿಯಿಂದ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಮದ್ಯವರ್ತಿಗಳ ಮಾತಿಗೆ ಫಲಾನುಭವಿಗಳು ಕಿವಿಕೊಡದೆ ನೇರವಾಗಿ ಪಂಚಾಯಿತಿ ಕಚೇರಿಯಿಂದ ಸಂಬಂಧಿಸಿದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಸರಕಾರದ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ ತಿಳಿಸಿದ್ದಾರೆ.