ವೀರಾಜಪೇಟೆ, ನ. 27: ವೀರಾಜ ಪೇಟೆ ನೆಹರೂ ನಗರದ ನವ ಜ್ಯೋತಿ ಯುವಕ ಸಂಘದಿಂದ ಡಿ. 9 ಹಾಗೂ 10 ರಂದು ತಾಲೂಕು ಮಟ್ಟದ ಟೈಗರ್ ಫೈವ್ 5+2 ಕಾಲ್ಚೆಂಡು ಪಂದ್ಯಾಟವನ್ನು ಇಲ್ಲಿನ ತಾಲೂಕು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಎಂ.ಎಂ. ಮುನ್ನಾ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಪಂದ್ಯಾಟ ಆಯೋಜಿಸಲಾಗಿದೆ. ಇದರಿಂದ ಗ್ರಾಮಾಂತರ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಸಾಧ್ಯವಾಗಲಿದೆ ಎಂದರು.

ಸಂಘದ ನಿರ್ದೇಶಕ ಜೂಡಿವಾಜ್ ಮಾತನಾಡಿ ವಿಜೇತರಿಗೆ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಲಾಗುವದು. ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ದೈಹಿಕ ಶಿಕ್ಷಕ ಪಿ.ಎ.ನಾಗೇಶ್, ಅಂಗನವಾಡಿ ಕಾರ್ಯಕರ್ತೆ ಕೆ.ಆರ್ ಗಿರಿಜಾ ಇವರುಗಳನ್ನು ಸನ್ಮಾನಿಸಲಾಗುವದು ಎಂದು ಹೇಳಿದರು.

ನಿರ್ದೇಶಕ ಕೆ.ಕೆ. ಪ್ರಕಾಶ್ ಮಾತನಾಡಿ, ಪಂದ್ಯಾಟವನ್ನು ತಾ.9ರಂದು ಪಟ್ಟಣ ಪಂಚಾಯಿತಿ ಸದಸ್ಯೆ ಬಿ.ಡಿ. ಸುನೀತ ಅವರ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಇ.ಸಿ.ಜೀವನ್ ಉದ್ಘಾಟಿಸಲಿದ್ದಾರೆ. ಅತಿಥಿಯಾಗಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಆರ್.ಗಣೇಶ್ ಇತರ ಪ್ರಮುಖರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ತಾ. 10ರಂದು ಸಂಜೆ 5 ಗಂಟೆಗೆ ಪಂದ್ಯಾಟದ ಸಮಾರೋಪ ನಡೆಯಲಿದೆ ಎಂದು ಹೇಳಿದರು.

ಕಾಲ್ಚೆಂಡು ಪಂದ್ಯಾಟದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ಮೊ. 9448132783 ಹಾಗೂ 9844558535 ಸಂಪರ್ಕಿಸಬಹುದು ಎಂದು ನಿರ್ದೇಶಕ ಪಿ. ಶಂಕರ್ ತಿಳಿಸಿದ್ದಾರೆ.