ನಾಪೆÇೀಕ್ಲು, ನ. 30: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತಿ, ಧರ್ಮದ ಬೇಧವಿಲ್ಲದೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿದ್ದಾಟಂಡ ಎಸ್. ತಮ್ಮಯ್ಯ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಸಮೀಪದ ಚೆರಿಯಪರಂಬು ಶಾದಿ ಮಹಲ್ ಕಟ್ಟಡದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ತಾನು ಕೂಡ ಮುಂದಿನ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಟಿಕೆಟ್ ಅಕಾಂಕ್ಷಿ. ನೂತನ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡುವ ಮೂಲಕ ಮತ್ತೆ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಅನುವು ಮಾಡಿಕೊಡಬೇಕು. ಪಕ್ಷದಲ್ಲಿ ಸಣ್ಣ, ಪುಟ್ಟ ಬಿನ್ನಾಭಿಪ್ರಾಯಗಳು ಸಾಮಾನ್ಯ. ಆದರೆ ವಿರೋಧ ಪಕ್ಷಗಳ ಬಾಯಿಗೆ ನಾವು ಆಹಾರವಾಗ ಬಾರದು. ಬಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಏಳಿಗೆಗೆ ಶ್ರಮಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕದ್ದಣಿಯಂಡ ಹರೀಶ್ ಬೋಪಣ್ಣ ಮಾತನಾಡಿ, ಪಿ.ಸಿ. ಹಸೈನಾರ್ ಹಾಜಿ ಜಾತ್ಯತೀತ ವ್ಯಕ್ತಿ. ಅವರ ವ್ಯಕ್ತಿತ್ವ, ಸಜ್ಜನಿಕೆ, ಗುಣಕ್ಕೆ ಅವರಿಗೆ ಉನ್ನತ ಪದವಿ ಲಭಿಸಿದೆ ಎಂದರು. ಈ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂಪಾಯಿ ಕಾಮಗಾರಿಗಳನ್ನು ಈಗಾಗಲೇ ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಲಾಗುವದು ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪಿ.ಸಿ. ಹಸೈನಾರ್ ಹಾಜಿ, ತಾನು ಯಾವತ್ತು ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಕೆಲಸಕ್ಕೆ ಪ್ರತಿ ಫಲವಾಗಿ ಯಾರಿಂದಲೂ ಒಂದು ಪೈಸೆ ಪಡೆದ ವನಲ್ಲ. ಜನರ ಕಷ್ಟಗಳಿಗೆ ಸ್ವಂದಿಸುವದೇ ತನ್ನ ಗುರಿ. ತಾನು ಯಾವದೇ ಟಿಕೆಟ್ ಅಕಾಂಕ್ಷಿಯಲ್ಲ ಎಂದರು.

ಕಾರ್ಯಕ್ರಮದಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೆಟ್ಟಿರ ಕುಶಾಲಪ್ಪ, ಅಧ್ಯಕ್ಷತೆ ವಹಿಸಿದ್ದ ಅರೆಯಡ ಡಿ. ಸೋಮಪ್ಪ ಮಾತನಾಡಿದರು. ವೇದಿಕೆಯಲ್ಲಿ ಅಖಿಲ ಭಾರತ ರಾಹುಲ್ ಬ್ರಿಗೇಡ್‍ನ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಮಹಮ್ಮದ್ ಹನೀಫ್, ಗ್ರಾ.ಪಂ. ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಸದಸ್ಯ ಅಬ್ದುಲ್ ಅಜೀಜ್, ಮುಖಂಡರಾದ ಕೊಟ್ಟಮುಡಿ ಹಂಸ, ಮಕ್ಕಿ ನಾಸಿರ್, ಅದಪೊಳೆ ಮಹಮ್ಮದ್ ಹಾಜಿ. ಹೆಚ್.ಎ. ಅಹಮದ್, ಕುಲ್ಲೇಟಿರ ಅರುಣ್ ಬೇಬ, ಚೋಕಂಡ ಸಂಜು ಮತ್ತಿತರರಿದ್ದರು.