ಮಡಿಕೇರಿ, ನ. 29: ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ‘ಕೌಶಲ್ಯ ಕರ್ನಾಟಕ ಯೋಜನೆಯಡಿ’ ಬೃಹತ್ ಉದ್ಯೋಗ ಮೇಳವನ್ನು ಜನವರಿ 6 ರಂದು ನಗರದ ಸಂತ ಮೈಕಲರ ಶಾಲೆಯಲ್ಲಿ ಆಯೋಜಿಸಲು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಯಿತು. ಸರ್ಕಾರ ಈಗಾಗಲೇ ಕೌಶಲ್ಯ ಕರ್ನಾಟಕ ಯೋಜನೆಯಡಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಆನ್‍ಲೈನ್ ಮೂಲಕ ಹೆಸರು ನೋಂದಣಿ ಕಾರ್ಯ ನಡೆದಿದೆ. ಆ ನಿಟ್ಟಿನಲ್ಲಿ ಉದ್ಯೋಗಾ ಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಲು ಬೃಹತ್ ಉದ್ಯೋಗ ಮೇಳ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು. ಕೌಶಲ್ಯ ಕರ್ನಾಟಕ ಯೋಜನೆ ಯಡಿ ಉದ್ಯೋಗ ಮೇಳ ಯಶಸ್ವಿ ಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ಉದ್ಯೋಗಾಕಾಂಕ್ಷಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಹ್ವಾನಿಸಲು ಕೈಗಾರಿಕಾ ತರಬೇತಿ ಸಂಸ್ಥೆ, ಇಂಜಿನಿಯರಿಂಗ್ ಕಾಲೇಜು ಹೀಗೆ ವೃತ್ತಿಪರ ತರಬೇತಿ ನೀಡುವ ಸಂಸ್ಥೆಗಳು ಉದ್ಯೋಗಾ ಕಾಂಕ್ಷಿಗಳನ್ನು ಕರೆತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ಹಾಡಿಯ ಉದ್ಯೋಗಾ ಕಾಂಕ್ಷಿಗಳು ಹೆಸರು ನೋಂದಾಯಿ ಸಲು ವಿಶೇಷ ಶಿಬಿರ ಆಯೋಜಿ ಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್ ಅವರಿಗೆ ಸೂಚಿಸಲಾಯಿತು.

ಕೌಶಲ್ಯ ಕರ್ನಾಟಕ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ರೇಡಿಯೋ ಕಾರ್ಯಕ್ರಮ ಏರ್ಪಡಿಸುವದು ಸೇರಿದಂತೆ ವ್ಯಾಪಕ ಮಾಹಿತಿ ನೀಡುವಂತೆ ಸಲಹೆ ಮಾಡಿದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಈಗಾಗಲೇ 4,800 ಮಂದಿ ಆನ್‍ಲೈನ್ ಮೂಲಕ ಹೆಸರು ನೋಂದಾ ಯಿಸಿದ್ದಾರೆ. ಇನ್ನೂ ಉದ್ಯೋಗಾ ಕಾಂಕ್ಷಿಗಳು ಹೆಸರು ನೋಂದಾಯಿ ಸಬಹುದಾಗಿದ್ದು, ಹೆಸರು ನೋಂದಾಯಿಸಿದ ಉದ್ಯೋಗಾ ಕಾಂಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿ.ಪಂ. ಯೋಜನಾ ನಿರ್ದೇಶಕ ಸಿದ್ದಲಿಂಗಮೂರ್ತಿ ಹಾಗೂ ಪೊನ್ನಂಪೇಟೆ ಕೈಗಾರಿಕಾ ತರಬೇತಿ ಸಂಸ್ಥೆಯ ರಾಘವೇಂದ್ರ ಕೌಶಲ್ಯ ಕರ್ನಾಟಕ ಆಯೋಜನೆ ಸಂಬಂಧ ಹಲವು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇ ಗೌಡ, ತಹಶೀಲ್ದಾರ್ ಕುಸುಮ, ಪೌರಾಯುಕ್ತೆ ಬಿ. ಶುಭ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್, ಐಟಿಡಿಪಿ ಇಲಾಖಾ ಅಧಿಕಾರಿ ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮಮ್ತಾಜ್, ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ, ತಾ.ಪಂ. ಇಒ ಜೀವನ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾವಿತ್ರಿ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಸಚಿನ್ ಇತರರು ಇದ್ದರು.