ಕುಶಾಲನಗರ, ನ. 29: ಕುಶಾಲನಗರವನ್ನು ಕೇಂದ್ರವಾಗಿಸಿಕೊಂಡು ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ 17ನೇ ದಿನದ ಧರಣಿಯಲ್ಲಿ ಕೂಡಿಗೆಯ ಕಟ್ಟಡ ಕಾರ್ಮಿಕರ ಸಂಘದ ಆಶ್ರಯದಲ್ಲಿ ಧರಣಿ ನಡೆಯಿತು. ಪಟ್ಟಣದ ಕಾರು ನಿಲ್ದಾಣದ ಆವರಣದಲ್ಲಿನ ಗುಂಡುರಾವ್ ಸತ್ಯಾಗ್ರಹ ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಲ್ಲೇಶ್ ನೇತೃತ್ವದಲ್ಲಿ ಪದಾಧಿಕಾರಿಗಳು ಪಾಲ್ಗೊಂಡು ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು.
ಸಂಘದ ಪದಾಧಿಕಾರಿಗಳಾದ ಪ್ರತಾಪ್, ಮೋಹನ್, ಕೆ.ಟಿ.ಪ್ರವೀಣ್, ಕೆ.ಸಿ.ಪ್ರವೀಣ್, ಹೋರಾಟ ಸಮಿತಿ ಪ್ರಮುಖರು ಇದ್ದರು.