ಸಿದ್ದಾಪುರ, ನ. 30: ಮಾಲ್ದಾರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಳಪಡುವ ಬಾಡಗ-ಬಾಣಂಗಾಲ ಗ್ರಾಮದ ಹುಂಡಿಯಲ್ಲಿ ಮಾಲ್ದಾರೆ ವಲಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಿ.ಎ. ಹಂಸ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ ಸಜಿ ಥೋಮಸ್ ನೇತೃತ್ವದಲ್ಲಿ ಮನೆ ಮನೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಈ ಸಂದರ್ಭ ಮಾತನಾಡಿದ ಅಲ್ಪಸಂಖ್ಯಾತ ಘಟಕದ ವಲಯ ಅಧ್ಯಕ್ಷ ಸಿ.ಎ. ಹಂಸ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ್ಗದವರಿಗೆ ಹಲವಾರು ಜನಪರ ಯೋಜನೆಗಳನ್ನು ಜಾರಿ ತಂದಿದೆ. ಇದಲ್ಲದೇ ಅನ್ನಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯದಂತ ಉತ್ತಮ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ. ಚುನವಾಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೀಡಿದ ಭರವಸೆಗಳ ಪೈಕಿ ಶೇ. 98 ರಷ್ಟು ಭಾಗ ಈಡೇರಿಸಿದ್ದು. ಈ ಹಿನ್ನೆಲೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಲ್ದಾರೆ ವಲಯ ಕಾಂಗ್ರೆಸ್ ಅಧ್ಯಕ್ಷ ಸಜಿ ಥೋಮಸ್ ಮಾತನಾಡಿ, ದೇಶದಲ್ಲೇ ಉತ್ತಮ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ ಎಂದರು. ನುಡಿದಂತೆ ನಡೆದ ಸರ್ಕಾರ ರಾಜ್ಯ ಸರ್ಕಾರವಾಗಿದೆಂದರು. ಈ ಹಿನ್ನೆಲೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವದು ಖಚಿತವೆಂದರು.
ಕಾರ್ಯಕ್ರಮದಲ್ಲಿ ತಾ.ಪಂ. ಸದಸ್ಯೆ ಚಿನ್ನಮ್ಮ, ಗ್ರಾ.ಪಂ. ಸದಸ್ಯರುಗಳಾದ ಉಮೇಶ, ಲಲಿತ, ಮಾಲತಿ, ಕಾಂಗ್ರೆಸ್ ಮುಖಂಡರುಗಳಾದ ಸಿ. ಮಹಮ್ಮದ್, ಮಹಮ್ಮದ್ ಆಲಿ, ಇತರರು ಹಾಜರಿದ್ದರು.