ಸುಂಟಿಕೊಪ್ಪ: ಸುಂಟಿಕೊಪ್ಪ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮ ಜಿ.ಪಂ. ಸದಸ್ಯೆ ಕೆ.ಪಿ.ಚಂದ್ರಕಲಾ ಅವರ ನೇತೃತ್ವದಲ್ಲಿ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರು ಸುಂಟಿಕೊಪ್ಪ ಪಟ್ಟಣದ ಮನೆ ಮನೆಗೆ ತೆರಳಿ ರಾಜ್ಯ ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳ ಬಗ್ಗೆ ಮನದಟ್ಟು ಮಾಡಿಕೊಟ್ಟರಲ್ಲದೆ 4 ವರ್ಷದ ಸರಕಾರದ ಸಾಧನೆಯ ಕೈಪಿಡಿಯನ್ನು ಜನರಿಗೆ ವಿತರಿಸಿದರು.

ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಎ. ಉಸ್ಮಾನ್, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಸದಸ್ಯರಾದ ಶೋಭಾ ರವಿ, ಶಿವಮ್ಮ ಮಹೇಶ್, ರತ್ನಾ ಜಯನ್, ಮಾಜಿ ಅಧ್ಯಕ್ಷ ಪಿ.ಎಫ್. ಸಬಾಸ್ಟೀನ್, ಎಂ.ಎಸ್. ರವಿ, ಜಯನ್ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.ಶ್ರೀಮಂಗಲ: ಕೇಂದ್ರದಲ್ಲಿ ಆಡಳಿತ ನಡೆಸಿದ ಹಾಗೂ ಪ್ರಸ್ತುತ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಕಾರ್ಯಕರ್ತರು ಮುಂದಾಗುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಕರೆ ನೀಡಿದರು.

ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಬೇಗೂರು ಗ್ರಾಮದಲ್ಲಿ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯ ಒದಗಿಸುವ ಆಡಳಿತವನ್ನು ನಡೆಸುತ್ತಿದೆ. ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮ ರೂಪಿಸಿದೆ. ರೈತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವÀರಿಗೂ ಸರ್ಕಾರ ಯೋಜನೆ ರೂಪಿಸಿದೆ. ಈ ಬಗ್ಗೆ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡುವಂತೆ ಕರೆ ನೀಡಿದರು. ಈ ಸಂದರ್ಭ ಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಹುದಿಕೇರಿ ಗ್ರಾ.ಪಂ. ಮಾಜಿ ಅಧ್ಯಕ್ಷ ಚೋಡುಮಾಡ ರವಿ ಚೋಮುಣಿ, ಪೊನ್ನಂಪೇಟೆ ಬ್ಲಾಕ್ ಉಪಾಧ್ಯಕ್ಷ ಅಹಮದ್, ಹುದಿಕೇರಿ ವಲಯ ಕಾರ್ಯದರ್ಶಿ ಆಲೀರ ಸಾದಲಿ, ಬೇಗೂರು ಬೂತ್ ಅಧ್ಯಕ್ಷ ಕೊಟ್ಟಂಗಡ ರಾಜ ಸುಬ್ಬಯ್ಯ, ಕಾರ್ಯಕರ್ತರಾದ ಅಪ್ಪಿ, ಕುಶ, ಬೋಸು, ಷಂಶುದ್ಧೀನ್, ಮಧು, ಮಮ್ಮದೆ ಮತ್ತಿತರರು ಹಾಜರಿದ್ದರು.ಸಿದ್ದಾಪುರ: ಚೆಟ್ಟಳ್ಳಿಯ ಕಂಡಕೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ರಾಜ್ಯ ಐ.ಎನ್.ಟಿ.ಯು.ಸಿ. ಸಂಘಟನೆಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಹಾಗೂ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ ಚಾಲನೆ ನೀಡಿದರು.

ಇದೇ ಸಂದರ್ಭ ಪಿ.ಸಿ. ಹಸೈನಾರ್ ಹಾಜಿ ಅವರು ರಾಜ್ಯ ಸರ್ಕಾರವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು. ರಾಜ್ಯದಲ್ಲಿ ಹಸಿವು ಮುಕ್ತ ಯೋಜನೆಯನ್ನು ಜಾರಿಗೆ ತಂದ ಹಿನ್ನೆಲೆ ಮುಖ್ಯಮಂತ್ರಿಯವರ ಬಗ್ಗೆ ಬಡ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುವದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಐ.ಎನ್.ಟಿ.ಯು.ಸಿ. ಸಂಘಟನೆಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದ ಉದ್ದೇಶ ಸರ್ಕಾರದ ಜನಪರ ಯೋಜನೆಯನ್ನು ಮನೆ ಮನೆಗೆ ತಲಪಿಸುವ ಉದ್ದೇಶವಾಗಿದೆ ಎಂದರು.

ಚೆಟ್ಟಳ್ಳಿ ಕಂಡಕೆರೆಯ ಹಯತುಲ್ ಇಸ್ಲಾಂ ಮಸೀದಿಯ ವತಿಯಿಂದ ರಾಜ್ಯ ಐ.ಎನ್.ಟಿ.ಯು.ಸಿ. ಸಂಘಟನೆಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಹಾಗೂ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ ಅವರನ್ನು ಮಸೀದಿ ಸಮಿತಿಯವರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ವಲಯ ಕಾಂಗ್ರೆಸ್ ಅಧ್ಯಕ್ಷ ಪಪ್ಪು ತಿಮ್ಮಯ್ಯ, ಕಾಂಗ್ರೆಸ್ ಅಲ್ಪಸಂಖ್ಯಾತ ಮೈಸೂರು ಉಸ್ತುವಾರಿ ಉಸ್ಮಾನ್, ಗ್ರಾ.ಪಂ. ಅಧ್ಯಕ್ಷೆ ವಿ.ಪಿ. ವತ್ಸಲ, ಗ್ರಾ.ಪಂ. ಮಾಜಿ ಅಧ್ಯಕ್ಷ ತೀರ್ಥಕುಮಾರ್, ಗ್ರಾ.ಪಂ. ಸದಸ್ಯ ರಾಫಿ, ಮುಖಂಡರುಗಳಾದ ರಜಾಕ್, ಶಶಿಕುಮಾರ್, ಶೂಕ್ಕೂರ್, ಗಫೂರ್, ಆಲಿ, ಹುಸೈನ್, ರಫೀಕ್, ಇತರರು ಹಾಜರಿದ್ದರು.