ಸೋಮವಾರಪೇಟೆ, ಡಿ. 1: ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ ಮತ್ತು ತಂತ್ರಜ್ಞಾನ ಪ್ರಕೋಷ್ಠದ ಸಭೆ ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆಯಿತು.

ಪ್ರಕೋಷ್ಠದ ಜಿಲ್ಲಾ ಸಂಚಾಲಕ ಅಪ್ಪಣ್ಣ ಸಭೆಯಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣ ಮತ್ತು ಇನ್ನಿತರ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಪಕ್ಷದ ಪ್ರಚಾರ ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸಬೇಕು ಎಂದರು. ಆಧುನಿಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ಪಕ್ಷದ ಸಾಧನೆಗಳು, ನರೇಂದ್ರ ಮೋದಿ ಸರ್ಕಾರದ ಜನಪರ ಯೋಜನೆಗಳು, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಒಳಪಡಿಸಬೇಕು. ಯುವ ಜನತೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಜಾಲತಾಣವನ್ನು ಬಳಸುತ್ತಿದ್ದು, ಪರಿಣಾಮಕಾರಿಯಾಗಿ ಇದನ್ನು ಬಳಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಪೊನ್ನಪ್ಪ, ಪ್ರಜಾ ಪೂಣಚ್ಚ, ತಾಲೂಕು ಸಂಚಾಲಕ ರಜಿತ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಮನು ರೈ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಕಿಬ್ಬೆಟ್ಟ ಮಧು, ತಾಲೂಕು ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪಕ್ಷದ ನಗರಾಧ್ಯಕ್ಷ ಸೋಮೇಶ್, ಪ್ರಮುಖರಾದ ರೂಪ ಸತೀಶ್, ಶ್ರೀಕಾಂತ್, ದಿವನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.