ಮಡಿಕೇರಿ, ಡಿ.1 : ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ವತಿಯಿಂದ ತಾ. 3 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಮಡಿಕೇರಿ ತಾಲೂಕಿನ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ವಿಶೇಷ ಚೇತನ ವಿದ್ಯಾರ್ಥಿಗಳು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೋರಿದ್ದಾರೆ.