ಮಡಿಕೇರಿ, ಡಿ. 1: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀaಯ ಮಾಧ್ಯಮಿಕ ಅಭಿಯಾನದ ಪ್ರಬಾರ ಉಪ ಯೋಜನಾ ಸಮನ್ವಯಾಧಿಕಾರಿ ಮಹದೇವು ಮಾತನಾಡಿ, ಇಂತಹ ಸ್ಪರ್ಧೆಗಳು ಶಿಕ್ಷಕರಲ್ಲಿ ಸೃಜನಶೀಲ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ನೆರವಾಗಿವೆ. ಶಿಕ್ಷಕರು ಪಾಠೋಪಕರಣಗಳನ್ನು ಬಳಸುವ ಮೂಲಕ ಬೋಧಿಸಿದಾಗ ಪರಿಣಾಮಕಾರಿ ಬೋಧನೆಯಾಗುತ್ತದೆ ಎಂದರು.

ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ ಮಾತನಾಡಿ, ಬೋಧನೆಯಲ್ಲಿ ತೊಡಗಿರುವ ಶಿಕ್ಷಕರಿಗೆ ತಮ್ಮಲ್ಲಿರುವ ಸುಪ್ತ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸುವ ದಿಸೆಯಲ್ಲಿ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆ ಸಹಕಾರಿಯಾಗಿವೆ ಎಂದರು.

ಡಿಡಿಪಿಐ ಕಚೇರಿಯ ಪ್ರಬಾರ ಶಿಕ್ಷಣಾಧಿಕಾರಿ ದೇವನಾಯಕ್, ಕಾರ್ಯಕ್ರಮದ ನೋಡೆಲ್ ಅಧಿಕಾರಿ ಬಿ.ಬಿ.¸ Áವಿತ್ರಿ, ಸರ್ವ ಶಿಕ್ಷಣ ಅಭಿಯಾನದ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಪರಶಿವಮೂರ್ತಿ, ಸರ್ಕಾರಿ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಗುರುರಾಜ್, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ, ಶಿಕ್ಷಣ ಸಂಯೋಜಕರಾದ ಕೆ. ಮೂರ್ತಿ, ಅನ್ರಿತಾ ಅಲ್ವಾರಿಸ್, ಚಿತ್ರಕಲಾ ಶಿಕ್ಷಕರಾದ ಉ.ರಾ. ನಾಗೇಶ್, ಬಸವರಾಜ್ ಬಡಿಗೇರಿ ಇತರರು ಇದ್ದರು.

ಈ ಸಂದರ್ಭ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಗಾಯನ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೋಪಕರಣಗಳ ತಯಾರಿಕೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಸಾಮಾನ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ನಡೆಸಲಾಯಿತು.

ವಿಷಯ ಪರಿವೀಕ್ಷಕಿ ಬಿ.ಬಿ. ಸಾವಿತ್ರಿ ಸ್ವಾಗತಿಸಿ, ಶಿಕ್ಷಣ ಸಂಯೋಜಕ ಕೆ.ಯು. ರಂಜಿತ್ ನಿರ್ವಹಿಸಿದರು. ಸಿಆರ್‍ಪಿ ಸರಸ್ವತಿ ವಂದಿಸಿದರು. ಕ್ವಿಜ್ ಮಾಸ್ಟರ್ ಸಿ.ಎಸ್. ಸುರೇಶ್ ಹಾಗೂ ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ ರಸಪ್ರಶ್ನೆ ಸ್ಪರ್ಧೆ ನಡೆಸಿಕೊಟ್ಟರು.