ಮೂರ್ನಾಡು, ಡಿ. 2: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಆರೋಗ್ಯಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ವ್ಯಾಸೆಕ್ಟಮಿ ಪಾಕ್ಷಿಕ ನ. 21 ರಿಂದ ಡಿ. 4 ರವರೆಗೆ ತಾಲೂಕು ಮಟ್ಟದ ಬೃಹತ್ ವ್ಯಾಸೆಕ್ಟಮಿ ಶಿಬಿರದ ಅರಿವು ಮೂಡಿಸುವ ಸಂಘಟನೆಯ ಸಪ್ತಾಹದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಮಾತನಾಡಿ, ಪುರುಷ ಸಂತಾನ ನಿರೋಧ ಶಸ್ತ್ರಚಿಕಿತ್ಸೆ ಏರ್ಪಡಿಸಲಾಗಿದ್ದು, ಈ ಶಸ್ತ್ರಚಿಕಿತ್ಸೆ ಶಾಶ್ವತ, ಸರಳ ಹಾಗೂ ಸುಲಭದ ವಿಧಾನವಾಗಿದೆ ಎಂದು ತಿಳಿಸಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ತಾಲೂಕು ಆರೋಗ್ಯಧಿಕಾರಿ ಡಾ. ಪಾರ್ವತಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ನಿಲೇಶ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ ಅಧ್ಯಕ್ಷತೆ ವಹಿಸಿದರು. ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅನುಷಾ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಟಿ.ಎ. ರೇವತಿ, ಗ್ರಾಮ ಪಂಚಾಯಿತಿ ಸದಸ್ಯೆ ಜಯಂತಿ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.