ಕುಶಾಲನಗರ, ಡಿ. 5: ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ಕುಶಾಲನಗರದಲ್ಲಿ ನಡೆಯುತ್ತಿರುವ ಸರಣಿ ಧರಣಿಯಲ್ಲಿ ಮಂಗಳವಾರ ಕುಶಾಲನಗರ ಹೋಬಳಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪಟ್ಟಣದ ಕಾರು ನಿಲ್ದಾಣದ ಆವರಣದಲ್ಲಿನ ಗುಂಡೂರಾವ್ ಸತ್ಯಾಗ್ರಹ ವೇದಿಕೆಯಲ್ಲಿ ಧರಣಿಯಲ್ಲಿ ಪಾಲ್ಗೊಂಡ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಮುಖ್ಯರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿ ತಾಲೂಕು ರಚನೆಗೆ ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಸಣ್ಣೇಗೌಡ, ಕಾರ್ಯದರ್ಶಿ ಬಿ.ಸಿ. ಮುರಳೀಧರ್, ಪ್ರಮುಖರಾದ ಪುರುಷೋತ್ತಮ ರೈ, ಕೆ.ಟಿ. ಅರುಣ್‍ಕುಮಾರ್, ಟಿ.ಪಿ.ರವಿ, ಹೆಚ್.ಟಿ.ಸಿ.ತಿಮ್ಮಪ್ಪ, ಅಪ್ಪಣ್ಣ, ದೊರೆಸ್ವಾಮಿ, ಮುತ್ತಪ್ಪ, ಸತೀಶ್, ರಾಮೇಗೌಡ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಗೂ ತಾಲೂಕು ಹೋರಾಟ ಸಮಿತಿ ಪ್ರಮುಖರು ಇದ್ದರು.