ನಾಪೆÉÇೀಕ್ಲು, ಡಿ. 5: ಲೋಕಸಭಾ ಸದಸ್ಯರ ಸ್ಥಾನ ಮಾನ ಅರಿಯದೆ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿರುವ ಮೈಸೂರಿನ ಪೆÇಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ಸೂಕ್ತ ತನಿಖೆಗೆ ಕ್ರಮಕೈಗೊಳ್ಳ ಬೇಕೆಂದು ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಹಾಲಿ ವೀರಾಜಪೇಟೆ ವಿಧಾನ ಸಭಾಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಆಗ್ರಹಿಸಿದ್ದಾರೆ.

ನಾಪೆÉÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಲೇಟಿರ ಐನ್‍ಮನೆ ಕಾಂಕ್ರೀಟ್ ರಸ್ತೆ, ಪಾಡಿಯಮ್ಮಂಡ ಐನ್‍ಮನೆ ರಸ್ತೆ ಮತ್ತು ಚೊನಕರೆ ಪಡಿಯಾಣಿ ರಸ್ತೆಗಳನ್ನು ಉದ್ಘಾಟಿಸಿ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಹುಣಸೂರಿನಲ್ಲಿ ಹನುಮ ಜಯಂತಿಯನ್ನು ಕಳೆದ 25 ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ. ಆದರೆ ಇಂದು ಸರಕಾರ ಜಾತಿ ಧರ್ಮದ ನಡುವೆ ವಿಷ ಬೀಜ ಬಿತ್ತುವ ಸಲುವಾಗಿ ಇದಕ್ಕೆ ನಿರ್ಬಂಧ ಹೇರುವ ಮೂಲಕ ಸಮಾಜದ ಶಾಂತಿಗೆ ಭಂಗತರುವ ಕಾರ್ಯವೆಸಗಿದೆ ಎಂದು ದೂರಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದೆ. ಹಿಂದೂ, ಮುಸಲ್ಮಾನರ ವಿರುದ್ಧ ಜಾತಿಯ ವಿಷಬೀಜ ಬಿತ್ತುವ ಕಾರ್ಯವನ್ನು ರಾಜ್ಯ ಸರಕಾರ ಮಾಡುತ್ತಿದೆ. ಜಾತಿ, ಜಾತಿಗಳ ನಡುವೆ ವೈಷಮ್ಯದ ಕಿಚ್ಚು ಹಚ್ಚಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ವಿನಾಃ ಕಾರಣ ಕೇಸು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು.

ಲೋಕಸಭಾ ಸದಸ್ಯರಿಗೆ ರಾಜ್ಯದಲ್ಲಿ ಸೂಕ್ತ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು ಎಂದು ಕೆ.ಜಿ.ಬಿ ಪ್ರಶ್ನಿಸಿದರು.

ಹಿಂದೆ ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಂದರ್ಭ ಜಿಲ್ಲೆಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿತ್ತು. ಆದರೆ ಇಂದು ರಾಜ್ಯ ಕಾಂಗ್ರೆಸ್ ಸರಕಾರ ಜಿಲ್ಲೆಯ ರಸ್ತೆಗಳ ಗುಂಡಿ ಮುಚ್ಚಲು ಅಸಮರ್ಥವಾಗಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವದು ಖಚಿತವಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಜನರ ರಸ್ತೆ, ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿದರು.

ವೇದಿಕೆಯಲ್ಲಿ ಮಡಿಕೇರಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಸದಸ್ಯರಾದ ನೆರೆಯಂಡಮ್ಮಂಡ ಉಮಾಪ್ರಭು, ಕೋಡಿಯಂಡ ಇಂದಿರಾ ಹರೀಶ್, ನಾಪೆÉÇೀಕ್ಲು ವಲಯ ಬಿ.ಜೆ.ಪಿ. ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹರೀಶ್ ಪೂವಯ್ಯ, ಎಮ್ಮೆಮಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ನೇರೂಟ್ ಆಲಿ, ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯರಾದ ಚೀಯಕಪೂವಂಡ ಮುತ್ತುರಾಣಿ ಅಚ್ಚಪ್ಪ, ಕುಲ್ಲೇಟಿರ ಜ್ಯೋತಿ ನಾಚಪ್ಪ, ಸ್ಥಳೀಯರಾದ ಚೀಯಕಪೂವಂಡ ಪ್ರಕಾಶ್ ಮಂದಣ್ಣ, ಚೀಯಕಪೂವಂಡ ಸತೀಶ್, ಕೊಂಬಂಡ ಗಣೇಶ್ ಇದ್ದರು.