ಮಡಿಕೇರಿ, ಡಿ. 4: ಕೊಡಗಿನ ಗಡಿಭಾಗದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊಡಗಿನ 45 ಪತ್ರಕರ್ತರು ಭೇಟಿ ನೀಡಿ ವೀಕ್ಷಿಸಿದರು. ಕೊಡಗು ಪ್ರೆಸ್ ಕ್ಲಬ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಮುದ್ರಣ, ದೃಶ್ಯ ಮಾಧ್ಯಮ ಪ್ರತಿನಿಧಿಗಳು ಆಗಮಿಸಿದ್ದರು.

ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಎನ್. ಪ್ರಕಾಶ್ ಕಣ್ಣೂರು ಇಂಟರ್‍ನ್ಯಾಷನಲ್ ಏರ್‍ಫೋರ್ಟ್ ಲಿಮಿಟೆಡ್ ಪ್ರಮುಖರೊಂದಿಗೆ ಚರ್ಚಿಸಿ, ಕೊಡಗಿನ ಪತ್ರಕರ್ತರ ಭೇಟಿಗೆ ಅವಕಾಶ ಕಲ್ಪಿಸಿದ್ದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಬಿ. ಮಂಜುನಾಥ್, ಉಪಾಧ್ಯಕ್ಷ ಆರ್. ಸುಬ್ರಮಣಿ, ಖಜಾಂಚಿ ರೆಜಿತ್‍ಕುಮಾರ್, ಸಂಘಟನಾ ಕಾರ್ಯದರ್ಶಿ ಎಂ.ಎ. ಅಜೀಜ್, ನಿರ್ದೇಶಕರಾದ ಎಸ್.ಎ. ಮುರಳೀಧರ್, ಎಸ್.ಎಂ. ಮುಬಾರಕ್, ನಾಗರಾಜಶೆಟ್ಟಿ, ಕರ್ನಾಟಕ ರಾಜ್ಯ ಪತ್ರಕರ್ತರ ಸಂಘ ನಿರ್ದೇಶಕ ಬಾಚರಣಿಯಂಡ ಅನು ಕಾರ್ಯಪ್ಪ, ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಕುಪ್ಪಂಡ ದತ್ತಾತ್ರಿ, ಜಿಲ್ಲಾ ಪತ್ರಕರ್ತರ ಸಂಘ ನಿರ್ದೇಶಕರಾದ ಎಚ್.ಕೆ. ಜಗದೀಶ್, ಕೆ.ಕೆ. ಗಿರಿಧರ್, ಸುವರ್ಣ ಮಂಜು, ವಿಜಯ ಹಾನಗಲ್, ಬಿ.ಎ. ಭಾಸ್ಕರ್, ಟಿ.ಕೆ. ಸಂತೋಷ್ ಮತ್ತಿತರರಿದ್ದರು.