*ವೀರಾಜಪೇಟೆ, ಡಿ. 5: ಇಲ್ಲಿನ ದಲಿತರ ಬಹು ದಿನಗಳ ಬೇಡಿಕೆಯಾದ ಅಂಬೇಡ್ಕರ್ ಭವನಕ್ಕೆ ಸೂಕ್ತ ಸಮಯದಲ್ಲಿ ಹಣ ಬಿಡುಗಡೆ ಆಗದೆ ಕಾಮಗಾರಿ ವಿಳಂಬವಾಗಿತ್ತು. ಇದೀಗ ಹಣ ಬಿಡುಗಡೆಗೊಳಿಸಿ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ವತಿಯಿಂದ ತ್ವರಿತವಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಹೇಳಿದರು.
ಇಲ್ಲಿನ ಹಳೇ ತಾಲೂಕು ಕಚೇರಿ ಸಮೀಪದ ಪಶು ವೈದ್ಯಕೀಯ ಆಸ್ಪತ್ರೆಯ ಬಳಿ ನಡೆಯುತ್ತಿರುವ ಅಂಬೇಡ್ಕರ್ ಭವನದ ಕಾವiಗಾರಿಯನ್ನು ಪರಿಶೀಲಿಸಿದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದರು. ಕಾಮಗಾರಿಯನ್ನು ಉತ್ತಮ ರೀತಿಯಲ್ಲಿ ನಡೆಸಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹೇಳಿದರು.
ದÀಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ವೀರಭದ್ರಯ್ಯ ಮಾತನಾಡಿ 2005ರಲ್ಲಿಯೇ ಭವನ ನಿರ್ಮಾಣವಾಗಬೇಕಿತ್ತು. ಆದರೆ ಕಾರಣಾಂತರದಿಂದ ಇಷ್ಟು ವರ್ಷ ಕಾಯಬೇಕಾಯಿತು. ಈ ಭವನದ ಆರಂಭಿಕ ಕೆಲಸಗಳಿಗೆ ಹಿಂದಿನ ಪ.ಪಂ. ಅಧ್ಯಕ್ಷ ಸತೀಶ್ ರೂ. 3 ಲಕ್ಷ, ಕಾಂತಿ ಸತೀಶ್ ರೂ. 2 ಲಕ್ಷ ನೀಡಿದ್ದರು.
ಇದೀಗ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದೆ. ಮುಂದಿನ ಅಂಬೇಡ್ಕರ್ ಜಯಂತಿಯನ್ನು ಇಲ್ಲೇ ಮಾಡುವ ಕನಸು ನಮ್ಮದಾಗಿದೆ ಎಂದು ಹೇಳಿದರು.
ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಆರ್.ಜಿ. ಸಚಿನ್ ಮಾತನಾಡಿ, ರೂ. 1.80 ಕೋಟಿ ವೆಚ್ಚದಲ್ಲಿ ಎರಡು ಅಂತಸ್ತಿನ ಕಾಮಗಾರಿಯಾಗಿದ್ದು, ಆರು ತಿಂಗಳ ಕಾಲಮಿತಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಮುಗಿಸುವ ಉದ್ದೇಶವಿದೆ ಎಂದರು. ಈ ಸಂದರ್ಭ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ಸದಸ್ಯರಾದ ಹೆಚ್. ರಾಮು, ಹೆಚ್.ಕೆ. ಗಣೇಶ್ ಹಾಗೂ ಕಾಂಗ್ರೆಸ್‍ನ ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.