ಮಡಿಕೇರಿ, ಡಿ. 5: ಮಡಿಕೇರಿ ತಾಲೂಕು ಮಟ್ಟದ ವ್ಯಾಸೆಕ್ಟಮಿ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಮುನಾ ವಹಿಸಿದ್ದರು.
ತಾಲೂಕು ಕ್ಷೇತ್ರ ಪ್ರಶಿಕ್ಷಣಾಧಿಕಾರಿ ಟಿ.ಎನ್. ಪಾಲಾಕ್ಷ ಸ್ವಾಗತಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಪಾರ್ವತಿ ಜನಸಂಖ್ಯಾ ಸ್ಫೋಟದಿಂದಾಗುವ ತೊಂದರೆಗಳು, ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆ ಸೇವೆಗಳಲ್ಲಿ ಗಂಡು-ಹೆಣ್ಣಿನ ತಾರತಮ್ಯ ಹೆಚ್ಚಾಗಿರುವದು ಹಾಗೂ ಪುರುಷ ಸಂತಾನ ಹರಣ ಶಸ್ತ್ರಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆನಂದ್ ಕುಟುಂಬ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಆರ್‍ಸಿಹೆಚ್ ಅಧಿಕಾರಿಗಳಾದ ಡಾ. ನೀಲೇಶ್, ವೈದ್ಯಾಧಿಕಾರಿ ಡಾ. ಅನುಷಾ ಹಾಗೂ ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.