ಮಡಿಕೇರಿ, ಡಿ. 4: ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ನಗರದ ಯುದ್ಧ ಸ್ಮಾರಕದಲ್ಲಿ ತಾ. 7 ರಂದು ಬೆಳಿಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ.ಇದರಲ್ಲಿ ಬ್ರಿಗೇಡಿಯರ್ ಎಂ.ಎನ್. ಕುಟ್ಟಯ್ಯ (ನಿವೃತ್ತ) ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ.