ಮಡಿಕೇರಿ, ಡಿ. 7: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಯಾದೇವಿ ಗಲಗಲಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ದೇವಕಿ, ಕಾರ್ಮಿಕ ಇಲಾಖೆ ಅಧಿಕಾರಿ ರಾಮಕೃಷ್ಣ, ಜಿ.ಪಂ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ವಿವಿಧ ಇಲಾಖೆ ಅಧಿಕಾರಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸೋಮವಾರಪೇಟೆ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ದಿನವನ್ನು ವಿವಿಧ ದಲಿತ ಪರ ಸಂಘಟನೆಗಳ ವತಿಯಿಂದ ಸೋಮವಾರಪೇಟೆಯಲ್ಲಿ ಆಚರಿಸಲಾಯಿತು.
ದಲಿತಪರ ಸಂಘಟನೆಗಳ ಮುಖಂಡರು ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಕೆಪಿಸಿಸಿ ಪರಿಶಿಷ್ಟ ಜಾತಿ ಇಲಾಖೆಯ ರಾಜ್ಯ ಸಂಚಾಲಕ ಬಿ.ಈ. ಜಯೇಂದ್ರ, ದಲಿತ ಸಂಘಟನೆಗಳ ಮುಖಂಡರಾದ ಜಯಪ್ಪ ಹಾನಗಲ್, ಡಿ.ಎಸ್. ನಿರ್ವಾಣಪ್ಪ, ಗಣೇಶ್, ರಾಮಕೃಷ್ಣ, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು, ಒಕ್ಕೂಟದ ಅಧ್ಯಕ್ಷ ಎಂ.ಪಿ. ಹೊನ್ನಪ್ಪ ಮತ್ತಿತರರು ಹಾಜರಿದ್ದರು.
ಶನಿವಾರಸಂತೆ
ಶನಿವಾರಸಂತೆ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹೋಬಳಿ ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 61ನೇ ಪರಿನಿರ್ವಾಣ ದಿನಾಚರಣೆ ಏರ್ಪಡಿಸಲಾಗಿತ್ತು.
ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅಂಬೇಡ್ಕರ್ ಅವರ ಗುಣಗಾನ ಮಾಡಿದರು. ನಂತರ ಸಮಿತಿಯ ಯುವಕರು ಶನಿವಾರಸಂತೆಯ ಮುಖ್ಯ ರಸ್ತೆಯಿಂದ ಸೋಮವಾರಪೇಟೆವರೆಗೆ ಬೈಕ್ ಜಾಥಾ ಮಾಡಿದರು.
ಈ ಸಂದರ್ಭ ದಲಿತ ಸಂಘಟನೆಯ ಜಿಲ್ಲಾ ಸಂಚಾಲಕರಾದ ರಾಮ್ ಕುಮಾರ್, ಜೆ.ಆರ್. ಪಾಲಾಕ್ಷ, ಹೋಬಳಿ ಸಮಿತಿಯ ಎಂ.ಜಿ. ಶಿವಶಂಕರ್, ಶರಣಯ್ಯ, ಮೋಹನ್ ಮೌರ್ಯ, ಎಸ್.ಎಸ್. ಶಿವಲಿಂಗ, ಮಂಜು, ನಾಗರಾಜ್, ಸಿ.ಡಿ. ರಂಗಯ್ಯ, ದೇವರಾಜ್, ಜಯರಾಜ್, ವಿಮಲಾಕ್ಷಿ, ಧನುಪ್ರಸಾದ್, ಗುರು, ಉಮೇಶ್, ಇತರರು ಪಾಲ್ಗೊಂಡಿದ್ದರು.
ಕುಶಾಲನಗರ
ಕುಶಾಲನಗರದ ದಲಿತ ಸಂಘರ್ಷ ಸಮಿತಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 61 ಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಕೆ.ಬಿ.ರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಕೆ.ಬಿ.ರಾಜು, ಸರ್ವರೂ ಸಮಾನತೆಯಿಂದ ಬಾಳ್ವೆ ನಡೆಸಬೇಕು ಎಂಬುದು ಅಂಬೇಡ್ಕರ್ ಅವರ ಕನಸಾಗಿತ್ತು. ಆದರೆ ಪ್ರಸ್ತುತ ವಿದ್ಯಮಾನಗಳಲ್ಲಿ ಜಾತಿ ರಾಜಕಾರಣ ಹೆಚ್ಚಾಗುತ್ತಿದ್ದು ದುರದೃಷ್ಟದÀ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭ ಸಮಿತಿ ತಾಲೂಕು ಸಂಘಟನಾ ಸಂಚಾಲಕ ಕೆ.ಟಿ.ಶ್ರೀನಿವಾಸ್, ಪ್ರಮುಖರಾದ ರಫೀಕ್, ಸೋನಿ ಡಿಸೋಜ, ಗೋಪಾಲ, ಕೀರ್ತಿರಾಜು, ಬಸವರಾಜು, ಶಶಿಕುಮಾರ್, ದೀಪಕ್ ಇದ್ದರು.