ಮಡಿಕೇರಿ, ಡಿ. 7: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ 2016-17ನೇ ಸಾಲಿನ ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ರಾಷ್ಟ್ರಪತಿ ಪ್ರಶಸ್ತಿ ವಿಜೇತ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಹಾಗೂ ಕೆಎಎಸ್ ಪದವಿ ಪಡೆದು ಉನ್ನತ ಹುದ್ದೆಯಲ್ಲಿರುವ ನಗರದ ಅಶೋಕಪುರ ನಿವಾಸಿ ಲಕ್ಷ್ಮೀ ಚಂದ್ರಶೇಖರ್ ಅವರುಗಳನ್ನು ಸನ್ಮಾನಿಸುವ ಕಾರ್ಯಕ್ರಮ ತಾ. 10 ರಂದು ನಡೆಯಲಿದೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಅಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಡಾ. ಹೆಚ್.ವಿ. ದೇವದಾಸ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ವಿ.ಎಸ್. ಸತೀಶ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೊಲೀಸ್ ಉಪ ಅಧೀಕ್ಷಕ ಕೆ.ಎಸ್. ಸುಂದರರಾಜ್, ಮಡಿಕೇರಿ ನಗರಸಭೆ ಆಯುಕ್ತೆ ಬಿ. ಶುಭ, ರಾಜರಾಜೇಶ್ವರಿ ದೇವಾಲಯದ ಧರ್ಮಾಧಿಕಾರಿ ಹೆಚ್.ಎಸ್. ಗೋವಿಂದ ಸ್ವಾಮಿ, ಗಾಳಿಬೀಡುವಿನ ಸಮಾಜ ಸೇವಕರು ಹಾಗೂ ದಾನಿಗಳಾದ ಟಿ.ಆರ್. ವಾಸುದೇವ್, ವ್ಯಾಂಡಮ್ ಎಂಟರ್‍ಪ್ರೈಸಸ್ ಮಾಲೀಕ ಕೆ.ಕೆ. ದಾಮೋದರ, ವೀರಾಜಪೇಟೆ ವಿಭಾಗಿಯ ದಸಂಸ ಸಂಚಾಲಕ ಎನ್. ವೀರಭದ್ರಯ್ಯ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.
ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಡಾ. ವಾಸುದೇವ್ ಅವರ ಹೆಸರಿನಲ್ಲಿ ಪದವಿ ಮತ್ತು ಪಿಯುಸಿಯ ಸಾಧಕ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಗುವದೆಂದು ಸಂಘಟನೆ ಸಂಚಾಲಕ ದಿವಾಕರ್ ತಿಳಿಸಿದ್ದಾರೆ.