ಕುಶಾಲನಗರ, ಡಿ. 7: ಮನುಷ್ಯ ತನ್ನ ಜ್ಞಾನ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳುವದರ ಜೊತೆಗೆ ದೇಶದ ಸಾಮಾಜಿಕ ಮತ್ತು ಸಾಂಸ್ಕøತಿಕ ನೆಲೆಗಟ್ಟಿನಲ್ಲಿ ಭದ್ರ ಬುನಾದಿ ಹಾಕಿಕೊಳ್ಳಲು ಇಂದಿನ ಶಿಕ್ಷಣ ವ್ಯವಸ್ಥೆ ಸಹಕಾರಿಯಾಗಿದೆ ಎಂದು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಮಾನವೀಯ ಸಂಕೀರ್ಣ ವಿಭಾಗದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಹಂಚಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಘಟಕದ ಮೇಲ್ವಿಚಾರಕ ಡಾ. ರಾಜಕುಮಾರ್ ಎಸ್. ಮೇಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಕೆ.ಕೆ. ಧರ್ಮಪ್ಪ, ವಿವಿಧ ವಿಭಾಗದ ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.