ಮಡಿಕೇರಿ, ಡಿ. 8: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಲಯನ್ಸ್ ಮತ್ತು ಲಯನೆಸ್ ಸಂಸ್ಥೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ರೋಟರಿ ಮಿಸ್ಟಿಹಿಲ್ಸ್, ಓಡಿಪಿ-ಸ್ನೇಹಾಶ್ರಯ ಸಮಿತಿ ಮಡಿಕೇರಿ ಹಾಗೂ ಸರ್ವೋದಯ ಎಚ್‍ಐವಿ ಬಾಧಿತರ ಸಂಪರ್ಕಜಾಲ ಕೊಡಗು, ಆಶೋದಯ ಸಮಿತಿ ಇವರ ಸಹಯೋಗದಲ್ಲಿ ತಾ. 13 ರಂದು ಬೆಳಿಗ್ಗೆ 9.30 ಗಂಟೆಗೆ ವಿಶ್ವ ಏಡ್ಸ್ ದಿನಾಚರಣೆ ಮತ್ತು ಜಾಥಾ ನಡೆಯಲಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ. ಎಂ.ಎಂ. ಮಹಾಸ್ವಾಮೀಜಿ ಜಾಥಾವನ್ನು ಉದ್ಘಾಟಿಸಲಿದ್ದಾರೆ. ಜಾಥಾವು ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ಪ್ರಾರಂಭಗೊಂಡು ನಗರದ ಕಾವೇರಿ ಕಲಾಕ್ಷೇತ್ರದವರೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿ.ಕಾ.ಸೇ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ. ಶಿವಕುಮಾರ್ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎ.ಸಿ. ಶಿವಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಎನ್. ಆನಂದ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಎಂ.ಎನ್. ನೀಲೇಶ್ ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರೇಷ್ಮೆ ಮಹಾಮಂಡಳಿ ನಿಗಮ ನಿಯಮಿತದ ಅಧ್ಯಕ್ಷ ಟಿ.ಪಿ. ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಪಿ.ಶಶಿ ಸುಬ್ರಮಣಿ ಇತರರು ಪಾಲ್ಗೊಳ್ಳಲಿದ್ದಾರೆ.