ನಾಪೆÉÇೀಕ್ಲು, ಡಿ. 8: ಕೊಡಗು ಜಿಲ್ಲೆಯ ರಸ್ತೆಗಳಲ್ಲಿ ವಾಹನ ಸಂಚಾರ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದ್ದು ತಾ. 30 ರ ಒಳಗೆ ಜಿಲ್ಲೆಯ ಎಲ್ಲಾ ಹದಗೆಟ್ಟ ರಸ್ತೆಗಳ ದುರಸ್ತಿಗೆ ಸರಕಾರ ಕ್ರಮಕೈಗೊಳ್ಳದಿದ್ದರೆ ಜೆಡಿಎಸ್ ಪಕ್ಷದ ವತಿಯಿಂದ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವದು ಎಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೆÉÇೀಕ್ಲುವಿನ ಎಂ.ಎ. ಮನ್ಸೂರ್ ಅಲಿ ಎಚ್ಚರಿಸಿದ್ದಾರೆ.

ಪಟ್ಟಣದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ರಸ್ತೆಗಳ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ. ಮಡಿಕೇರಿ - ವೀರಾಜಪೇಟೆ, ಮಡಿಕೇರಿ - ಭಾಗಮಂಡಲ, ಮಡಿಕೇರಿ - ನಾಪೆÇೀಕ್ಲು ಮುಖ್ಯ ರಸ್ತೆ ಸೇರಿದಂತೆ ಗ್ರಾಮಾಂತರ ರಸ್ತೆಗಳಾದ ಕೊಳಕೇರಿ, ಎಡಪಾಲ, ಕೋಕೇರಿ ರಸ್ತೆಗಳಲ್ಲಿ ರಸ್ತೆ ಸರಿಯಿಲ್ಲದ ಕಾರಣ ಖಾಸಾಗಿ ಬಸ್‍ಗಳೂ ಕೂಡ ಸಂಚಾರ ಸ್ಥಗಿತಗೊಳಿಸಿವೆ. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹೆಚ್ಚಿನ ಸಮಸ್ಯೆಯಾಗಿದೆ. ಎಂದರು. ರಸ್ತೆ ದುರಸ್ತಿಗೆ ಸಂಬಂಧಿಸಿದವರು ತಾ. 30 ಒಳಗೆ ಕ್ರಮಕೈಗೊಳ್ಳದಿದ್ದಲ್ಲಿ ಪಕ್ಷದ ವತಿಯಿಂದ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಜೆಡಿಎಸ್‍ನ ಹಿರಿಯ ಮುಖಂಡ ಬೊಪ್ಪೇರ ಸಿ. ಕಾವೇರಪ್ಪ. ನಾಪೆÇೀಕ್ಲು ಗ್ರಾಮ ಪಂಚಾಯತಿ ಸದಸ್ಯ ಪಿ.ಎಂ. ರಷೀದ್ ಇದ್ದರು.